ಬಿಗ್ ಬ್ರೇಕಿಂಗ್: ಕೊನೆಗೂ ಬಯಲಾಯ್ತು ಮಂಡ್ಯದಲ್ಲಿ ನಿಜವಾಗಿ ಗೆಲ್ಲುವ ಆಭ್ಯರ್ಥಿಯ ಹೆಸರು.?

2019ರ ಲೋಕಸಭಾ ಚುನಾವಣೆಯ ಚುನಾವಣೋತ್ತರ ಸಮೀಕ್ಷೆ ಪ್ರಕಟಗೊಂಡಿದೆ. ಕರ್ನಾಟಕದ 28 ಕ್ಷೇತ್ರಗಳ ಪೈಕಿ ಬಿಜೆಪಿ ಹೆಚ್ಚು ಸ್ಥಾನಗಳನ್ನುಗಳಿಸಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಕಾಂಗ್ರೆಸ್‌-ಜೆಡಿಎಸ್ ಮೈತ್ರಿಕೂಟಕ್ಕೆ ಹಿನ್ನಡೆ ಉಂಟಾಗಲಿದೆ ಎಂಬುದು ವರದಿ.

ಸೋಮವಾರ ಸಂಜೆ ಟಿವಿ 9 ಕರ್ನಾಟಕದ 28 ಕ್ಷೇತ್ರಗಳ ಫಲಿತಾಂಶವನ್ನು ಪ್ರಕಟಿಸಿದೆ. ಸಿ-ವೋಟರ್ ನಡೆಸಿದ ಸಮೀಕ್ಷೆಯ ಫಲಿತಾಂಶವಿದು ಎಂದು ಎಲ್ಲಾ ಕ್ಷೇತ್ರಗಳ ಫಲಿತಾಂಶವನ್ನು ಪ್ರಸಾರ ಮಾಡಿದೆ. ಇದರಲ್ಲಿಯೂ ಸಹ ಬಿಜೆಪಿ ಮೇಲುಗೈ ಸಾಧಿಸಲಿದೆ.

ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಕ್ಷೇತ್ರ ಮಂಡ್ಯ. ಸಿ-ವೋಟರ್ ಸಮೀಕ್ಷೆ ಪ್ರಕಾರ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಗೆಲುವು ಸಾಧಿಸಲಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಸೋಲು ಅನುಭವಿಸಲಿದ್ದಾರೆ ಎಂದು ಸಮೀಕ್ಷೆ ಭವಿಷ್ಯ ನುಡಿದಿದೆ.

Comments