ಬೆಂಗಳೂರು, ಮೇ 21 : 2019ರ ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಕರ್ನಾಟಕದ ರಾಜಕೀಯದಲ್ಲಿ ಮಹತ್ವದ ಬದಲಾವಣೆಯಾಗಲಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಳ್ಳುವ ಸುದ್ದಿಗಳು ಹಬ್ಬಿವೆ. ಬಿಜೆಪಿ ವಲಯದಲ್ಲಿಯೂ ಅಚ್ಚರಿಯ ಸುದ್ದಿಯೊಂದು ಹೊರ ಬಿದ್ದಿದೆ.
ಲೋಕಸಭಾ ಚುನಾವಣೆಯ ಚುನಾವಣೋತ್ತರ ಸಮೀಕ್ಷೆಗಳು ಕರ್ನಾಟಕದಲ್ಲಿ ಬಿಜೆಪಿ 20+ ಸ್ಥಾನಗಳಲ್ಲಿ ಜಯಗಳಿಸಲಿವೆ ಎಂದು ಹೇಳಿವೆ. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು '22 ಸ್ಥಾನಗಳಲ್ಲಿ ಪಕ್ಷ ಜಯಗಳಿಸಲಿದೆ' ಎಂದು ಹಲವು ಬಾರಿ ಹೇಳಿದ್ದಾರೆ. ನಂತರ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ಹೇಳಲಾಗುತ್ತಿದೆ. ಈ ಮೂಲಕ ಯಡಿಯೂರಪ್ಪನವರು ನಾಲ್ಕನೇ ಬಾರಿ ಮುಖ್ಯಮಂತ್ರಿಯಾಗುವ ಮೂಲಕ ದಾಖಲೆ ಬರೆಯಲಿದ್ದಾರೆ.
Comments
Post a Comment