ರಾಜ್ಯದ 61 ನಗರ ಸ್ಥಳೀಯ ಸಂಸ್ಥೆಗಳಿಗೆ ಬುಧವಾರ ನಡೆದ ಚುನಾವಣೆಯ ಫಲಿತಾಂಶದ ಮತಎಣಿಕೆ ಆರಂಭವಾಗಿದೆ. 8 ನಗರಸಭೆ, 33 ಪುರಸಭೆ ಹಾಗೂ 22 ಪಟ್ಟಣ ಪಂಚಾಯತಿಗಳ 1,296 ವಾರ್ಡ್ ಗಳಲ್ಲಿ 4,360 ಮಂದಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಲೋಕಸಭೆಯಲ್ಲಿ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್-ಜೆಡಿಎಸ್ ಈ ಬಾರಿ ಪ್ರತ್ಯೇಕವಾಗಿ ಸ್ಪರ್ಧಿಸಿವೆ.
ಒಟ್ಟು 16 ಸ್ಥಾನಗಳನ್ನು ಹೊಂದಿರುವ ಮೊಳಕಾಲ್ಮೂರು ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ 9 ಸ್ಥಾನ, ಕಾಂಗ್ರೆಸ್ 5 ಸ್ಥಾನಗಳಲ್ಲಿ ಜಯ ಸಾಧಿಸಿದೆ. ಸುಳ್ಯ ನಗರ ಪಂಚಾಯಿತಿಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಸಾಧಿಸಿತ್ತು. 20 ಸ್ಥಾನಗಳಲ್ಲಿ 14 ರಲ್ಲಿ ಗೆದ್ದು ಬೀಗಿದೆ. ಕಾಂಗ್ರೆಸ್ 4 ರಲ್ಲಿ ಗೆಲುವು ಸಾಧಿಸಿದೆ.
ಗುಂಡ್ಲುಪೇಟೆ ಪುರಸಭೆಯ ಒಟ್ಟು 23 ಸ್ಥಾನಗಳಲ್ಲಿ 18 ಸ್ಥಾನಗಳ ಫಲಿತಾಂಶ ಘೋಷಣೆಯಾಗಿದ್ದು, ಬಿಜೆಪಿ 9, ಕಾಂಗ್ರೆಸ್ 7, ಎಸ್ ಡಿಪಿಐ 1 ಹಾಗೂ ಪಕ್ಷೇತರ 1 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.
Comments
Post a Comment