ಬಿಗ್ ನ್ಯೂಸ್: ಪ್ರಿಯಾಂಕ ಗಾಂಧಿ ಮುಖ್ಯಮಂತ್ರಿ ಆಭ್ಯರ್ಥಿ.? ಯಾವ ರಾಜ್ಯಕ್ಕೆ ಗೊತ್ತಾ.?

.ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡು ಅಖಾಡಕ್ಕಿಳಿದು ತೀವ್ರ ಸಂಚಲನ ಮೂಡಿಸಿದ್ದ ಪ್ರಿಯಾಂಕಾ ಗಾಂಧಿ ಆಟ ನಡೆಯಲಿಲ್ಲ. ಕಾಲಿಗೆ ಚಕ್ರಕಟ್ಟಿಕೊಂಡವರಂತೆ ಪ್ರಿಯಾಂಕಾ ಗಾಂಧಿ ಬಿರುಸಿನ ಪ್ರಚಾರ ನಡೆಸಿದ್ದರೂ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ತಕ್ಕಮಟ್ಟಿ ಗೆಲ್ಲಲು ಸಾಧ್ಯವಾಗಿಲ್ಲ. ಉತ್ತರ ಪ್ರದೇಶದಲ್ಲಿ 80 ಸೀಟುಗಳ ಪೈಕಿ ಕಾಂಗ್ರೆಸ್ ಒಂದೇ ಕ್ಷೇತ್ರದಲ್ಲಿ ಗೆಲ್ಲುವಲ್ಲಿ ಮಾತ್ರ ಯಶಸ್ವಿಯಾಗಿದೆ.

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸೋಲಿಗೆ ಕಾರಣಗಳೇನೆಂದು ಅರಿಯಲು ಪ್ರಿಯಾಂಕಾ ಗಾಂಧಿ ಅವರು ರಾಯ್ ಬರೇಲಿಯಲ್ಲಿ ಪರಾಮರ್ಶನಾ ಸಭೆ ನಡೆಸಿದ್ದು, 2022ರ ಉತ್ತರ ಪ್ರದೇಶ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಅವರೇ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಗಬೇಕೆಂದು ಸಭೆಯಲ್ಲಿ ಕಾಂಗ್ರೆಸ್ ಮುಖಂಡರು ಆಗ್ರಹಿಸಿದ್ದಾರೆ . ಈ ಬಗ್ಗೆ ಸ್ವತಃ ವಾರಾಣಾಸಿ ಮಾಜಿ ಸಂಸದ, ಕಾಂಗ್ರೆಸ್ ನಾಯಕ ರಾಜೇಶ್ ಮಿಶ್ರಾ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು,  'ಮುಂಬರುವ ಉಪ ಚುನಾವಣೆ ಮತ್ತು ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಬಲಪಡಿಸುವಂತೆ ಪ್ರಿಯಾಂಕಾ ಗಾಂಧಿ ಅವರಿಗೆ ಮನವಿ ಮಾಡಿದ್ದೇವೆ. ಬಿಜೆಪಿಯ ಸವಾಲನ್ನು ಎದುರಿಸಲು ನೀವೇ ಮುಖ್ಯಮಂತ್ರಿ ಅಭ್ಯರ್ಥಿಯಾಗಬೇಕು ಎಂದು ತಿಳಿಸಿದ್ದೇವೆ ಎಂದು ಹೇಳಿದರು.

ಅಷ್ಟೇ ಅಲ್ಲದೇ ಯಾವುದೇ ರಾಜಕೀಯ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳದೆ ಏಕಾಂಗಿಯಾಗಿ ಚುನಾವಣೆ ಎದುರಿಸುವುದು ಸೂಕ್ತ ಎಂಬ ಸಲಹೆಗಳನ್ನು ಸಹ ನೀಡಿದ್ದೇವ ಎಂದು ಮಾಧ್ಯಮಗಳಿಗೆ ತಿಳಿಸಿದರು. ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ 80 ಸೀಟುಗಳ ಪೈಕಿ ಕಾಂಗ್ರೆಸ್ ಗೆದ್ದಿರುವುದು ಒಂದೇ ಒಂದು ಕ್ಷೇತ್ರದಲ್ಲಿ. ಅದೂ  ರಾಯ್ ಬರೇಲಿಯಲ್ಲಿ ಸೋನಿಯಾ ಗಾಂಧಿ ಮಾತ್ರ.  ಉಳಿದಂತೆ ಯಾವ ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಗೆಲುವು ಕಾಣಲು ಸಾಧ್ಯವಾಗಿಲ್ಲ.

 ಇದೀಗ ವಿಧಾನಸಭೆ ಚುನಾವಣೆಗಳ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್, ಹೇಗಾದರೂ ಮಾಡಿ ಉತ್ತರ ಪ್ರದೇಶವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳು ಈಗಿನಿಂದಲೇ ತಾಲೀಮು ಆರಂಭಿಸಿದೆ. ಶೀಘ್ರದಲ್ಲಿಯೇ ಉತ್ತರ ಪ್ರದೇಶದ 12 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನಡೆಯಲಿದ್ದು, ಇದಕ್ಕೆ ಬೇಕಾದ ಕಾರ್ಯತಂತ್ರಗಳ ಬಗ್ಗೆ ಸಭೆಯಲ್ಲಿ ಚರ್ಚೆಗಳು ನಡೆದಿವೆ.

Comments