ಉದ್ಯೋಗದ ನಿರೀಕ್ಷೆಯಲ್ಲಿದ್ದ ಕನ್ನಡಿಗರಿಗೆ ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಸಂದರ್ಭದಲ್ಲಿ ಕನ್ನಡಿಗರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಹೇಳಿದ್ದಾರೆ. ಬೆಳಗಾವಿಯಲ್ಲಿ ಶನಿವಾರದಂದು ಬೆಳಗಾವಿ-ಬೆಂಗಳೂರು ಸೂಪರ್ ಫಾಸ್ಟ್ ವಿಶೇಷ ರೈಲಿಗೆ ಚಾಲನೆ ನೀಡಿ ಮಾತನಾಡಿದ ಅವರು, ರೈಲ್ವೆ ಇಲಾಖೆಯಲ್ಲಿ ಸಾಕಷ್ಟು ಉದ್ಯೋಗಾವಕಾಶಗಳಿವೆ. ಆದರೆ ನಮ್ಮ ಯುವಕರು ಇದಕ್ಕೆ ಅರ್ಜಿ ಹಾಕುತ್ತಿಲ್ಲ. ಖಾಲಿ ಹುದ್ದೆಗಳ ಭರ್ತಿ ವೇಳೆ ನಮ್ಮವರಿಗೆ ಹೆಚ್ಚಿನ ಆದ್ಯತೆ ನೀಡಲಿದ್ದು, ಇದನ್ನು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದ್ದಾರೆ.
ರೈಲ್ವೆ ಇಲಾಖೆಗೆ ಆರ್ಥಿಕ ಕೊರತೆಯಿಲ್ಲ ಎಂದು ತಿಳಿಸಿದ ಸಚಿವ ಸುರೇಶ್ ಅಂಗಡಿ, ಹೀಗಾಗಿ ಅಭಿವೃದ್ಧಿ ಕಾಮಗಾರಿಗಳು ನಿಗದಿತ ಸಮಯದಲ್ಲಿ ಪೂರ್ಣಗೊಳ್ಳಲಿವೆ. ಅಲ್ಲದೆ ಶೀಘ್ರದಲ್ಲಿಯೇ ಬೆಳಗಾವಿ-ಪುಣೆ ನಡುವೆ ಪುಲ್ ಮತ್ತು ಪುಶ್ ರೈಲ್ವೆ ಆರಂಭಿಸುವುದಾಗಿ ತಿಳಿಸಿದರು.
Comments
Post a Comment