ಜೆಡಿಎಸ್ ನೂತನ ರಾಜ್ಯಾಧ್ಯಕ್ಷ ಹುದ್ದೆಗೆ ದಲಿತರಿಗೆ ಅವಕಾಶ ಮಾಡಿಕೊಡುವ ಚಿಂತನೆ ನಡೆಸಿರುವುದಾಗಿ ಜೆಡಿಎಸ್ ಪಕ್ಷದ ವರಿಷ್ಠ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಧು ಬಂಗಾರಪ್ಪ ಅವರೂ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅರ್ಹರಾಗಿದ್ದು, ಜವಾಬ್ದಾರಿ ನಿರ್ವಹಿಸುವ ಶಕ್ತಿ ಅವರಿಗಿದೆ. ಸದ್ಯದಲ್ಲೇ ಎಲ್ಲರನ್ನೂ ಕರೆದು ಸಭೆ ನಡೆಸಿ 2-3 ದಿನಗಳಲ್ಲಿ ಹೊಸ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಲಾಗುವುದು ಎಂದರು.
ಮಧು ಬಂಗಾರಪ್ಪ ಅವರಿಗೆ ಅಧ್ಯಕ್ಷ ಪಟ್ಟ ಕಟ್ಟಲು ಸಿಎಂ ಕುಮಾರಸ್ವಾಮಿ ಹಾಗೂ ಹಾಲಿ ಅಧ್ಯಕ್ಷ ಹೆಚ್. ವಿಶ್ವನಾಥ್ ಒಲವು ಹೊಂದಿದ್ದರೂ, ಸಕಲೇಶಪುರ ಮೀಸಲು ಕ್ಷೇತ್ರದ ಹಿರಿಯ ಶಾಸಕ ಎಚ್.ಕೆ.ಕುಮಾರಸ್ವಾಮಿ ಅಥವಾ ಮೂಡಿಗೆರೆ ಮಾಜಿ ಶಾಸಕ ಬಿ.ಬಿ. ನಿಂಗಯ್ಯ ಪೈಕಿ ಒಬ್ಬರಿಗೆ ಅವಕಾಶ ನೀಡಲು ದೇವೇಗೌಡರು ಬಯಸಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
Comments
Post a Comment