ಹೆಚ್.ಡಿ. ದೇವೇಗೌಡರು ಜೆಡಿಎಸ್ ಬಲಪಡಿಸುವ ಉದ್ದೇಶದಿಂದ ರಾಜ್ಯಾದ್ಯಂತ ಪಾದಯಾತ್ರೆಗೆ ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಅಹಿಂದ ಸಮಾವೇಶದ ಮೂಲಕ ಕಾಂಗ್ರೆಸ್ ಬಲಪಡಿಸಲು ಮುಂದಾಗಿದ್ದಾರೆ. ಈ ಅಹಿಂದ ಸಮಾವೇಶಕ್ಕೆ ಸಿದ್ದರಾಮಯ್ಯ ಅವರು ಹೊಸ ತಂಡವನ್ನು ಕಟ್ಟುವ ಸಾಧ್ಯತೆ ಇದ್ದು, ಕುರುಬ ಸಮುದಾಯಕ್ಕೆ ಸೇರಿದ ಶಾಸಕ ಬೈರತಿ ಸುರೇಶ್ ಹಾಗೂ ಮುಸ್ಲಿಂ ಸಮುದಾಯದ ಪ್ರಬಲ ನಾಯಕ ಸಚಿವ ಜಮೀರ್ ಅಹ್ಮದ್ ಗೆ ಸಮಾವೇಶ ಸಂಘಟನೆಯ ಹೊಣೆಗಾರಿಕೆಯನ್ನು ವಹಿಸೋ ಸಾಧ್ಯತೆ ಇದೆ ಎನ್ನಲಾಗಿದೆ.
ಸಮಾವೇಶಕ್ಕೆ ಸಚಿವರಾದ ಆರ್. ಬಿ. ತಿಮ್ಮಾಪುರ್, ಮಾಜಿ ಸಚಿವ ಹೆಚ್. ಆಂಜನೇಯ, ಹೆಚ್. ಸಿ. ಮಹದೇವಪ್ಪ, ಮಳವಳ್ಳಿ ಮಾಜಿ ಶಾಸಕ ನರೇಂದ್ರ ಸ್ವಾಮಿಗೆ ಜವಾಬ್ದಾರಿ ಸಿಗುವ ಸಾಧ್ಯೆಯೂ ಇರುವುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.
Comments
Post a Comment