ಲೋಕಸಭಾ ಚುನಾವಣೆಯಲ್ಲಿ ಭಾರೀ ಸೋಲಿನ ಬಳಿಕ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ರಾಜೀನಾಮೆ ನೀಡಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷ ಅದನ್ನು ಅಂಗೀಕರಿಸಲು ನಿರಾಕರಿಸಿದೆ. ಈ ಬಗ್ಗೆ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಪ್ರತಿಕ್ರಿಯಿಸಿದ್ದಾರೆ. ರಾಹುಲ್ ಗಾಂಧಿ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬಾರದು, ಪ್ರತಿಯೊಂದು ಕ್ಷೇತ್ರದಲ್ಲಿ ಸೋಲು-ಗೆಲುವು ಇದ್ದದ್ದೇ, ಸೋತಾಗ ಹತಾಶರಾಗದೆ ಗೆಲುವಿಗಾಗಿ ಮತ್ತಷ್ಟು ಪ್ರಯತ್ನಿಸಬೇಕು ಎಂದು ರಜನಿಕಾಂತ್, ರಾಹುಲ್ ಗಾಂಧಿಗೆ ಸಲಹೆ ನೀಡುವ ಮೂಲಕ ರಾಹುಲ್ ಬೆನ್ನಿಗೆ ನಿಂತಿದ್ದಾರೆ.
Comments
Post a Comment