ಉತ್ತರ ಪ್ರದೇಶದ ಎತವಾ ಕ್ಷೇತ್ರದ ಹಾಲಿ ಸಂಸದ ಅಶೋಕ್ ಕುಮಾರ್ ದೊಹ್ರೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಪಕ್ಷ ಸೇರಿದ್ದಾರೆ. ಈಗಾಗಲೇ ಸಾಕಷ್ಟು ಸಂಖ್ಯೆಯಲ್ಲಿ ಮುಖಂಡರು ಪಕ್ಷಾಂತರ ಮಾಡುತ್ತಿದ್ದು, ವಿವಿಧ ಪಕ್ಷಗಳಲ್ಲಿ ಈ ರೀತಿಯ ಬೆಳವಣಿಗೆಗಳಾಗುತ್ತಿವೆ. ಇನ್ನು ರಾಜ್ಯ ರಾಜಕೀಯದಲ್ಲಿಯೂ ಕೂಡ ಸಾಕಷ್ಟು ಮುಖಂಡರು ಪಕ್ಷ ಬಿಜೆಪಿಯಿಂದ ಕಾಂಗ್ರೆಸ್ ಗೆ ಕಾಂಗ್ರೆಸ್ ನಿಂದ ಬಿಜೆಪಿಗೆ ಪಕ್ಷಾಂತರ ಮಾಡುತ್ತಿದ್ದಾರೆ.
Comments
Post a Comment