ಸ್ಪೋಟಕ ಬ್ರೇಕಿಂಗ್: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೆಸರು ಫಿಕ್ಸ್, ಗೌಡರ ತಂತ್ರಗಾರಿಕೆ ಆಯ್ಕೆ

ಹೆಚ್. ವಿಶ್ವನಾಥ್ ರಾಜೀನಾಮೆಯಿಂದ ತೆರವಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನವನ್ನು ಈ ಬಾರಿ ಪರಿಶಿಷ್ಟ ಸಮುದಾಯಕ್ಕೆ ಫಿಕ್ಸ್ ಆಗಿದೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಸ್ಪಷ್ಟಪಡಿಸಿದ್ದಾರೆ. ಇಂದು ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಿಂದುಳಿದ ವರ್ಗಗಳ ಮುಂಖಡರ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ದಲಿತ ಕೋಟಾದಲ್ಲಿ ಸಕಲೇಶಪುರ ಜೆಡಿಎಸ್ ಶಾಸಕ ಹೆಚ್.ಕೆ. ಕುಮಾರಸ್ವಾಮಿಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡುವಂತೆ ತಿಳಿಸಿದ್ದಾರೆ ಎಂದು ಹೇಳಲಾಗಿದೆ.

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಹೆಚ್.ಕೆ. ಕುಮಾರಸ್ವಾಮಿ ಆಯ್ಕೆ ಬಹುತೇಕ ಖಚಿತವಾಗಿದೆ ಎನ್ನಲಾಗಿದ್ದು, ಕೊನೆ ಕ್ಷಣದಲ್ಲಿ ನಿರ್ಧಾರ ಬದಲಾವಣೆ ಸಾಧ್ಯತೆ ಇದೆ. ತಿಮ್ಮರಾಯಪ್ಪ ಕೂಡ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅರ್ಹರಾಗಿದ್ದಾರೆ ಎಂದು ದೇವೇಗೌಡರು ತಿಳಿಸಿದ್ದು, ಜುಲೈ 11 ಅಥವಾ 12 ರಂದು ಜೆಡಿಎಸ್ ಸಮಾವೇಶದಲ್ಲಿ ರಾಜ್ಯಾಧ್ಯಕ್ಷರ ಹೆಸರನ್ನು ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

Comments