ಆನಂದ್ ಸಿಂಗ್ ಮತ್ತು ರಮೇಶ್ ಜಾರಕಿಹೊಳಿ ರಾಜೀನಾಮೆ ಬಗ್ಗೆ ಮಾಹಿತಿ ಪಡೆದ ಕಾಂಗ್ರೆಸ್ ಹೈಕಮಾಂಡ್ ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳಲು ಕಾರ್ಯತಂತ್ರ ರೂಪಿಸಿದೆ.
ಈ ನಿಟ್ಟಿನಲ್ಲಿ ರಾಜ್ಯನಾಯಕರಿಗೆ ಸೂಚನೆ ನೀಡಲಾಗಿದ್ದು, ಅತೃಪ್ತ ಶಾಸಕರ ಮನವೊಲಿಕೆಗೆ ಮುಂದಾದ ರಾಜ್ಯ ಕಾಂಗ್ರೆಸ್ ನಾಯಕರು, ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನ ನಡೆಸಿದ್ದಾರೆ. ಇದರ ಭಾಗವಾಗಿ ಪಕ್ಷ ನಿಷ್ಠ ಸಚಿವರ ರಾಜೀನಾಮೆ ಕೊಡಿಸಿ ಅತೃಪ್ತ ಶಾಸಕರಿಗೆ ಸಚಿವ ಸ್ಥಾನ ಶಾಸಕ ಸ್ಥಾನ ನೀಡಲಿದ್ದಾರೆ ಎನ್ನಲಾಗಿದೆ.
ಅಮೆರಿಕದಿಂದಲೇ ಇಲ್ಲಿನ ಬೆಳವಣಿಗೆ ಬಗ್ಗೆ ಮಾಹಿತಿ ಪಡೆದ ಸಿಎಂ ಸರ್ಕಾರ ಉಳಿಸಿಕೊಳ್ಳಲು ಜೆಡಿಎಸ್ ನಿಂದಲೂ ಕೆಲವು ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡುವ ಬಗ್ಗೆ ಮಾತನಾಡಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಿಂದ ಪಕ್ಷ ನಿಷ್ಠ ಕೆಲವು ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಿ ಸಮ್ಮಿಶ್ರ ಸರ್ಕಾರವನ್ನು ಸಂಕಷ್ಟದಿಂದ ಪಾರು ಮಾಡಲು ಪ್ಲಾನ್ ಮಾಡಿಕೊಳ್ಳಲಾಗಿದೆ ಎನ್ನಲಾಗಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ನ ಈ ಮಾಸ್ಟರ್ ಪ್ಲಾನ್ ನಿಂದಾಗಿ ಬಿಜೆಪಿಗೆ ಶಾಕ್ ಕೊಟ್ಟಂತಾಗಿದೆ.
Comments
Post a Comment