ಇದೀಗ ಬಂದ ಸುದ್ದಿ: ವಿಶ್ವಾಸಮತಯಾಚನೆಯಲ್ಲಿ ಗೆದ್ದ ಬೆನ್ನಲ್ಲೇ ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಯಡಿಯೂರಪ್ಪ.?

ವಿಶ್ವಾಸಮತಯಾಚನೆಯಲ್ಲಿ ಅಧಿಕೃತವಾಗಿ ಗೆಲುವು ಸಾಧಿಸಿದ ಬಳಿಕ ಯಡಿಯೂರಪ್ಪ ಮಾತಿನ ಮೂಲಕ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಕರ್ನಾಟಕ ರಾಜ್ಯದ ಜನತೆಗೆ ಸುಭದ್ರ ಹಾಗೂ ಜನಪರ ಕಾರ್ಯಗಳ ಮೂಲಕ ಜನಸ್ನೇಹಿ ಸರ್ಕಾರವನ್ನು ನೀಡುವುದಾಗಿ ಭರವಸೆ ನೀಡುವ ಮೂಲಕ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ.

ಬೆಳೆ ವಿಮೆ ನೋಂದಣಿ ಅವಧಿ ಆಗಸ್ಟ್​​​ 14ರವರೆಗೂ ವಿಸ್ತರಣೆ ಮಾಡುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಆಗತ್ಯವಿದ್ದರೆ ಈ ಬಗ್ಗೆ ಕೇಂದ್ರ ಸರಕಾರದ ಗಮನಕ್ಕೆ ತರಲಾಗುವುದು ಅಂತ ಸಿ.ಎಂ ಬಿಎಸ್‌ವೈ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

2019-20ರ ಮುಂಗಾರು ಹಂಗಾಮಿನ ಬೆಳೆ ವಿಮೆಗಾಗಿ ನೋಂದಾಯಿಸಲು ಇದೀಗ ಆಗಸ್ಟ್​​ 14 ಅಂತಿಮ ದಿನಾಂಕವಾಗಿದೆ. ಮುಸುಕಿನ ಜೋಳ (ನೀರಾವರಿ/ಮಳೆಯಾಶ್ರಿತ), ಭತ್ತ (ನೀರಾವರಿ/ಮಳೆಯಾಶ್ರಿತ), ರಾಗಿ (ಮಳೆಯಾಶ್ರಿತ) ಬೆಳೆಗಾರರು ಬಿತ್ತನೆ/ನಾಟಿ ಮಾಡುವುದಕ್ಕಿಂತ ಮುಂಚಿತವಾಗಿಯೇ ನೋಂದಾಯಿಸಲು ಸಹ ಅವಕಾಶವಿದೆ.

ಇನ್ನು ಬೆಳೆ ಸಾಲ ಪಡೆಯುವ ರೈತರಿಗೆ ಬೆಳೆ ವಿಮೆ ಕಡ್ಡಾಯವಾಗಿದೆ. ಸಾಲ ನೀಡುವ ಸಂಸ್ಥೆಗಳು ನೋಂದಾಯಿಸಿಕೊಳ್ಳುವರು ಆಗಿದ್ದಾರೆ. ಬೆಳೆ ಸಾಲ ಪಡೆಯದ ರೈತರು ತಮಗೆ ಹತ್ತಿರವಿರುವ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಕೃಷಿ, ಕಂದಾಯ, ಸಹಕಾರ ಇಲಾಖೆಯನ್ನು ಸಂಪರ್ಕಿಸಬೇಕಿದೆ.

Comments