ಮೈತ್ರಿ ಸರ್ಕಾರ ವಿರುದ್ಧ ಬಂಡಾಯವೆದ್ದಿರುವ ಅತೃಪ್ತ ಶಾಸಕರ ಪೈಕಿ ಯಾರೊಬ್ಬರೂ ಈಗ ನೀಡಿರುವ ರಾಜೀನಾಮೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಶಾಸಕ ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ಭಿನ್ನಮತೀಯರೊಂದಿಗೆ ಮುಂಬೈನಲ್ಲಿ ವಾಸ್ತವ್ಯ ಹೂಡಿರುವ ಅವರು ಮುಂಬೈನಿಂದ ದೂರವಾಣಿ ಮೂಲಕ ಮಾತನಾಡಿ, ಕೆಲವು ಅತೃಪ್ತರು
ಯಾವುದೇ ಕಾರಣಕ್ಕೂ ಅತೃಪ್ತರು ರಾಜೀನಾಮೆ ಹಿಂಪಡೆಯುವುದಿಲ್ಲ. ಕೆಲವರು ರಾಜೀನಾಮೆಯನ್ನು ಹಿಂಪಡೆದು ಸರ್ಕಾರಕ್ಕೆ ಬೆಂಬಲ ನೀಡುತ್ತಾರೆ ಎನ್ನುವುದು ಸುಳ್ಳು. ವಿಶ್ವಾಸಮತ ಯಾಚನೆ ಮಾಡಲು ಮುಂದಾಗಿರುವುದು ರಾಜಕೀಯ ತಂತ್ರಗಾರಿಕೆ ಎಂದು ಟೀಕಿಸಿದರು.
ವಿಧಾನಮಂಡಲದಲ್ಲಿ ಹಣಕಾಸು ಮಸೂದೆ ಮಂಡನೆ ಮಾಡಬಹುದು. ಆದರೆ, ಅದು ಅಂಗೀಕಾರವಾಗಬೇಕು. ಇಲ್ಲದಿದ್ದರೆ ಕಷ್ಟವಾಗಲಿದೆ. ಒಂದು ವೇಳೆ ಹಣಕಾಸು ಮಸೂದೆ ಅಂಗೀಕರವಾಗದಿದ್ದರೆ ಸರ್ಕಾರ ಬಿದ್ದು ಹೋಗಲಿದೆ. ಬಳಿಕ ಮುಂದೆ ರಚನೆ ಮಾಡುವ ಸರ್ಕಾರವು ಹಣಕಾಸು ಮಸೂದೆಯನ್ನು ಮಂಡಿಸಿ ಅಂಗೀಕರಿಸಲಿದೆ ಎಂದು ತಿಳಿಸಿದರು.
Comments
Post a Comment