ಇದೀಗ ಬಂದ ಸುದ್ದಿ: ರಾಜಕೀಯದ ಗೊಂದಲಗಳಿಗೆ ಟ್ವೀಟರ್ ಮೂಲಕ ಸ್ಪಷ್ಟನೆ ನೀಡಿದ ಕುಮಾರಸ್ವಾಮಿ.?

ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವುದಕ್ಕೆ ಸಂಬಂಧಿಸಿದ ಊಹಾಪೂಹಗಳಿಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಈ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ' ಬಿಜೆಪಿ ಜೊತೆ ಸಂಬಂಧ ಬೆಸೆಯುವ ಆಧಾರ ರಹಿತ ಸುದ್ದಿಗಳನ್ನು ಗಮನಿದ್ದೇನೆ. ಸತ್ಯಕ್ಕೆ ದೂರವಾದ ಈ ರೀತಿಯ ಊಹಾಪೋಹಗಳಿಗೆ ನಮ್ಮ ಶಾಸಕರು ಹಾಗೂ ಕಾರ್ಯಕರ್ತರು ಕಿವಿಗೊಡಬೇಕಾಗಿಲ್ಲ, ಜನ ಸೇವೆಯ ಮೂಲಕ ಪಕ್ಷವನ್ನು ಕಟ್ಟೋಣ. ನಮ್ಮ ಜನಪರ ಹೋರಾಟ ನಿರಂತರ ಎಂದು ಹೆಚ್ಡಿಕೆ ಟ್ವೀಟ್ ಮಾಡಿದ್ದಾರೆ.

Comments