ನೂತನ ಸರ್ಕಾರದಲ್ಲಿ ಸ್ಪೀಕರ್ ಆಗಿ ಮುಂದುವರೆಯಲು ಇಷ್ಟವಿಲ್ಲ ಎಂದು ಹೇಳುವ ಮೂಲಕ ಕೆ.ಆರ್ ರಮೇಶ್ ಕುಮಾರ್ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ನೂತನ ಸರ್ಕಾರದಲ್ಲಿ ಸ್ಪೀಕರ್ ಆಗಿ ಮುಂದುವರೆಯಲು ನನಗೆ ಇಷ್ಟವಿಲ್ಲ. ಸೋಮವಾರ ನಡೆಯುವ ವಿಧಾನಸಭೆ ಅಧಿವೇಶನದಲ್ಲಿ ಎಲ್ಲವನ್ನೂ ಸ್ಪಷ್ಟಪಡಿಸುತ್ತೇನೆ ಎಂದರು.
ಸ್ಪೀಕರ್ ಆಗಿ ಈ ಬಾರಿ ನನ್ನ ಮೇಲೆ ಭಾರಿ ಒತ್ತಡ ಇತ್ತು. ನ್ಯಾಯಾಂಗದ ನಿಗಾ ಕೂಡ ನನ್ನ ಮೇಲಿತ್ತು. ಒಟ್ಟಾರೆ ಎಲ್ಲವನ್ನ ಸಮರ್ಥವಾಗಿ ನಿಭಾಯಿಸಿದ್ದೇನೆ ಎಂಬ ನಂಬಿಕೆ ಇದೆ ಎಂದರು.
Comments
Post a Comment