ಇದೀಗ ಬಂದ ಸುದ್ದಿ: ಬಿಜೆಪಿಗೆ ಸೇರ್ಪಡೆಗೊಳ್ಳಲಿರುವ ಕರ್ನಾಟಕ ಕಾಂಗ್ರೆಸ್ ನ ಪ್ರಭಾವಿ ಮಾಜಿ ಸಚಿವ.? ಮತ್ತಷ್ಟು ಬಲಿಷ್ಠಗೊಂಡ ಬಿಜೆಪಿ.?

ಬಿಜೆಪಿ ನೂರಕ್ಕೆ ನೂರರಷ್ಟು ಬಹುಮತ ಸಾಬೀತು ಪಡಿಸುತ್ತೆ ಅಂತ ಮಾಜಿ ಜೆಡಿಎಸ್‌ ಶಾಸಕ, ಹಾಲಿ ಕಾಂಗ್ರೆಸ್‌ ಮುಖಂಡ ಚಲುವರಾಯಸ್ವಾಮಿ ಅವರು ಸಿಎಂ ಬಿಎಸ್‌ವೈ ಪರ ಬ್ಯಾಟಿಂಗ್ ಬೀಸಿದ್ದಾರೆ.ಅವರು ಇಂದು ನಾಗಮಂಗಲದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ವಿಷಯ ತಿಳಿಸಿದರು. ಇದೇ ವೇಳೆ ಅವರು ಮಾತನಾಡುತ್ತ ಮೈತ್ರಿ ಪಕ್ಷದ 17 ಶಾಸಕರು ಅನರ್ಹರಾಗಿದ್ದು

ಹೀಗಾಗಿ ಮ್ಯಾಜಿಕ್ ನಂಬರ್ ತಲುಪಲು ಸದನದಲ್ಲಿ ಹಾಜರಿರುವ ಸದಸ್ಯರ ಸಂಖ್ಯೆ ಮುಖ್ಯ. ಬಿಜೆಪಿ ನೂರಕ್ಕೆ ನೂರರಷ್ಟು ಬಹುಮತ ಸಾಬೀತು ಪಡಿಸಲಿದೆ. ಯಡಿಯೂರಪ್ಪನವರು ನಮ್ಮ ಜಿಲ್ಲೆಯವರು. ಅವರಿಗೆ ಒಳ್ಳೆಯದಾಗಲಿ, ದೇವರು ಆಯಸ್ಸು, ಆರೋಗ್ಯ ಕರುಣಿಸಲಿ. ಈಗಾಗಲೇ ಬೂಕನಕೆರೆಗೆ ಆಗಮಿಸಿ ಗ್ರಾಮದ ಅಭಿವೃದ್ಧಿಗೆ ಅನುದಾನ ಘೋಷಿಸಿದ್ದಾರೆ. ಮುಂದೆ ಜಿಲ್ಲೆಗೆ ಒಳ್ಳೆಯ ಕೆಲಸ ಮಾಡುತ್ತಾರೆ ಅನ್ನೋ ನಂಬಿಕೆ ಇದೆ ಅಂತ ಅವರು ಹೇಳಿದರು.

ಇನ್ನು ಮಾಜಿ ಶಾಸಕ ಚಲುವರಾಯಸ್ವಾಮಿ ಅವರು ಲೋಕಸಭಾ ಚುನಾವಣೆಯಿಂದ ಪರೋಕ್ಷವಾಗಿ ಬಿಜೆಪಿಗೆ ಬೆಂಬಲ ವ್ಯಕ್ತಪಡಿಸುತ್ತಿದ್ದು, ರಾಜ್ಯದಲ್ಲಿ ಮೈತ್ರಿ ಸರಕಾರ ರಚನೆಯಾದ ಬಳಿಕ ಅವರ ರಾಜಕೀಯ ನಡೆ ಬಗ್ಗೆ ಹಲವು ಅನುಮಾನಗಳು ಮೂಡಿ ಬರುತ್ತಿದ್ದಾವೆ. ಹೀಗಾಗಿ ಅವರು ಬಿಜೆಪಿಗೆ ಸೇರಲಿದ್ದಾರೆ ಎನ್ನುತ್ತಿದ್ದಾರೆ ಮಂಡ್ಯದ ಜನತೆ, ಆದರೆ ಈ ಬಗ್ಗೆ ಕಾಲವೇ ತಿಳಿಸಲಿದೆ.

Comments