ಫೇಸ್ ಬುಕ್ ನಲ್ಲಿ ಅತಿಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಕರ್ನಾಟಕದ ರಾಜಕಾರಣಿ ಯಾರು ಗೊತ್ತಾ..?

ಕರ್ನಾಟಕದಲ್ಲಿ ಲಕ್ಷಾಂತರ ಜನರು ಫೇಸ್‌ಬುಕ್‌, ಟ್ವಿಟ್ಟರ್, ವಾಟ್ಸಾಪ್ ನಂತಹ ಸಾಮಾಜಿಕ ಜಾಲತಾಣಗಳನ್ನ ಬಳಸುತ್ತಾರೆ. ಹಾಗಾಗಿ ಎಲ್ಲಾ ಪಕ್ಷದವರು ಸಾಮಾಜಿಕ ಜಾಲತಾಣಗಳ ಬಳಕೆದಾರರ ಮೇಲೆ ಕಣ್ಣಿಟ್ಟಿದ್ದಾರೆ. ತಮ್ಮ ತಮ್ಮ ನೆಚ್ಚಿನ ನಾಯಕರನ್ನ ಸಾಮಾಜಿಕ ಜಾಲತಾಣಗಳ ಮುಖಾಂತರ ಅಭಿಮಾನಿಗಳು ಫಾಲೋ ಮಾಡುತ್ತಿರುತ್ತಾರೆ.

ಕರ್ನಾಟಕದ ಸಾಮಾಜಿಕ ಜಾಲತಾಣಗಳಲ್ಲಿ ಯಾವ ರಾಜಕೀಯ ನಾಯಕ ಅತಿಹೆಚ್ಚು ಅಭಿಮಾನಿಗಳನ್ನು ಹೊಂದಿದ್ದಾರೆ ಎನ್ನುವ ಪ್ರಶ್ನೆ ನಿಮ್ಮಲ್ಲೂ ಇದೆ ಅಲ್ವಾ? ಅದಕ್ಕೆ ಉತ್ತರ ಇಲ್ಲಿದೆ ನೋಡಿ. ಕರ್ನಾಟಕದ ಪ್ರಮುಖ ಮೂವರು ನಾಯಕರುಗಳೆಂದರೆ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕಾಂಗ್ರೆಸ್ ನಿಂದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗು ಜಾತ್ಯಾತೀತ ಜನತಾದಳದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ.

ಈ ಮೂವರು ನಾಯಕರುಗಳು ತಮ್ಮ ಅಧಿಕೃತ ಫೇಸ್‌ಬುಕ್‌ ಖಾತೆಯಲ್ಲಿ ಹೊಂದಿರುವ ಅಭಿಮಾನಿಗಳ ಸಂಖ್ಯೆ ಈ ಕೆಳಗಿನಂತಿದೆ. ಎಚ್.ಡಿ.ಕುಮಾರಸ್ವಾಮಿಯವರ ಫೇಸ್‌ಬುಕ್‌ ಖಾತೆಯನ್ನ 2.41 ಲಕ್ಷ ಜನ ಫಾಲೋ ಮಾಡುತ್ತಿದ್ದಾರೆ. ಇನ್ನು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಅಧಿಕೃತ ಫೇಸ್‌ಬುಕ್‌ ಖಾತೆಯಲ್ಲಿ 2.25 ಲಕ್ಷ ಜನರಿದ್ದಾರೆ. ಇವರಿಬ್ಬರೂ ನಾಯಕರನ್ನೂ ಮೀರಿಸುವಷ್ಟು ಅಭಿಮಾನಿಗಳನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಫೇಸ್‌ಬುಕ್‌ ನಲ್ಲಿ ಹೊಂದಿದ್ದಾರೆ. ಯಡಿಯೂರಪ್ಪನವರ ಅಧಿಕೃತ ಫೇಸ್‌ಬುಕ್‌ ಪೇಜ್ ಅನ್ನು ಬರೋಬ್ಬರಿ 17.36 ಲಕ್ಷ ಜನ ಫಾಲೋ ಮಾಡುತ್ತಿದ್ದಾರೆ! ಇನ್ನು ಕರ್ನಾಟಕದ ಮುಖ್ಯಮಂತ್ರಿಗಳ ಅಧಿಕೃತ ಸರ್ಕಾರಿ ಫೇಸ್ ಬುಕ್ ಪೇಜ್ ನಲ್ಲಿ ಬರೋಬ್ಬರಿ 10 ಲಕ್ಷ ಜನ ಅಭಿಮಾನಿಗಳಿದ್ದಾರೆ.

Comments