ಮತ್ತೆ ಕಾಂಗ್ರೆಸ್​ ಸೇರಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್..!

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಇಂದು ಮತ್ತೆ ಕಾಂಗ್ರೆಸ್​ ಸೇರಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸಮ್ಮುಖದಲ್ಲಿ ರಮೇಶ್​ ಕುಮಾರ್ ಪಕ್ಷಕ್ಕೆ ಸೇರ್ಪಡೆಗೊಂಡರು. ಕಾಂಗ್ರೆಸ್​ ಹಾಗೂ ಜೆಡಿಎಸ್​ ನೇತೃತ್ವದ ಸರ್ಕಾರದಲ್ಲಿ ಅವರನ್ನ ಸ್ಪೀಕರ್​ ಸ್ಥಾನಕ್ಕೆ ಆಯ್ಕೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ಕಾಂಗ್ರೆಸ್​ನ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಬಳಿಕ ಮಾತನಾಡಿದ ದಿನೇಶ್ ಗುಂಡೂರಾವ್, ಸ್ಪೀಕರ್ ಆದ ನಂತರ ಪಕ್ಷದ ಜೊತೆ ಗುರ್ತಿಸಿಕೊಳ್ಳುವಂತಿಲ್ಲ. ಹೀಗಾಗಿ ಸದಸ್ಯ ಸ್ಥಾನದಿಂದ ರಮೇಶ್ ಕುಮಾರ್ ಕೆಳಗಿಳಿದಿದ್ದರು. ಇದೀಗ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಬಳಿಕ ಮತ್ತೆ ಪಕ್ಷದ ಸದಸ್ಯತ್ವ ಪಡೆದಿದ್ದಾರೆ. ರಮೇಶ್ ಕುಮಾರ್ ಮಾರ್ಗದರ್ಶನ ಪಕ್ಷಕ್ಕೆ ಅತ್ಯವಶ್ಯಕ. ಅವರು ಪಕ್ಷಕ್ಕೆ ಸೇರಿರೋದು ನಮಗೆ ಮತ್ತಷ್ಟು ಬಲ ಸಿಕ್ಕಂತಾಗಿದೆ ಅಂತಾ ಹೇಳಿದರು.

Comments