ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಚಿವ ಸಂಪುಟ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಗೆ ಹೊರಡಲು ಸಿದ್ದರಾಗಿದ್ದರು. ಜೊತೆಗೆ ಸಚಿವ ಸ್ಥಾನದ ಆಕಾಂಕ್ಷಿಗಳೂ ಸಹ ಹೈಕಮಾಂಡ್ ಮಟ್ಟದಲ್ಲಿ ಲಾಬಿ ನಡೆಸಲು ಮುಂದಾಗಿದ್ದರು. ಆದರೆ ಇದೀಗ ಬಿಜೆಪಿ ಹೈಕಮಾಂಡ್ ಸಿಎಂ ಸೇರಿದಂತೆ ಎಲ್ಲರಿಗೂ ಶಾಕಿಂಗ್ ಸಂದೇಶ ರವಾನಿಸಿದೆ ಎನ್ನಲಾಗಿದೆ.
ಪ್ರಧಾನಿ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಅಗಸ್ಟ್ 7 ರ ವರೆಗೆ ಬೇರೆ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಹಾಗಾಗಿ ರಾಜ್ಯ ನಾಯಕರು ದೆಹಲಿಗೆ ಬರೋದು ಬೇಡ ಎಂಬ ಸಂದೇಶವನ್ನು ಹೈಕಮಾಂಡ್ ರವಾನಿಸಿದೆ ಎನ್ನಲಾಗಿದೆ.
ಇನ್ನು, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಸಿ.ಎಂ.ಉದಾಸಿ, ಜೆ.ಸಿ. ಮಾಧುಸ್ವಾಮಿ, ಉಮೇಶ್ ಕತ್ತಿ, ಮುರುಗೇಶ್ ನಿರಾಣಿ, ರೇಣುಕಾಚಾರ್ಯ, ಬಸನಗೌಡ ಪಾಟೀಲ್ ಯತ್ನಾಳ್, ಸಿ.ಸಿ.ಪಾಟೀಲ್, ಶಶಿಕಲಾ ಜೊಲ್ಲೆ, ದತ್ತಾತ್ರೇಯ ಪಾಟೀಲ್ ರೇವೂರ್ ಅವರು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ.
Comments
Post a Comment