ಸ್ಪೋಟಕ ಬ್ರೇಕಿಂಗ್: ಸಚಿವ ಸಂಪುಟ ವಿಸ್ತರನೆಯ ಬೆನ್ನಲ್ಲೇ ರಾಜೀನಾಮೆಗೆ ಮುಂದಾದ ಬಿಜೆಪಿಯ ಇಬ್ಬರು ಸಚಿವರು.?

ಇದುವರೆಗೂ ಸಚಿವ ಸ್ಥಾನ ಸಿಗದಿರುವ ಶಾಸಕರ ಅಸಮಾಧಾನದಿಂದ ಹೈರಾಣಾಗಿದ್ದ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ, ಈಗ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಬಳಿಕ ಹೊಸ ಸಮಸ್ಯೆ ಎದುರಾಗಿದೆ. ತಮಗೆ ಬಯಸಿದ ಖಾತೆ ಸಿಗಲಿಲ್ಲ ಹಾಗೂ ಹಿರಿತನವನ್ನು ಪರಿಗಣಿಸಿ ಉಪ ಮುಖ್ಯಮಂತ್ರಿ ಸ್ಥಾನ ನೀಡಲಿಲ್ಲ ಎಂಬ ಕಾರಣಕ್ಕೆ ಭಿನ್ನಮತ ಸ್ಪೋಟಗೊಂಡಿದ್ದು, ಇಬ್ಬರು ಸಚಿವರು ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆಂಬ ಮಾತುಗಳು ಕೇಳಿಬರುತ್ತಿವೆ.

ಜಗದೀಶ್ ಶೆಟ್ಟರ್ ಈಗಾಗಲೇ ಒಮ್ಮೆ ಮುಖ್ಯಮಂತ್ರಿಯಾಗಿದ್ದರೆ, ಕೆ.ಎಸ್. ಈಶ್ವರಪ್ಪ ಹಾಗೂ ಆರ್. ಅಶೋಕ್ ಉಪ ಮುಖ್ಯಮಂತ್ರಿಗಳಾಗಿ ಕಾರ್ಯ ನಿರ್ವಹಿಸಿದ್ದವರು. ಹೀಗಾಗಿ ತಮಗೆ ಉಪ ಮುಖ್ಯಮಂತ್ರಿ ಹುದ್ದೆ ಸಿಗಬಹುದೆಂಬ ನಿರೀಕ್ಷೆಯಲ್ಲಿದ್ದಾರೆ. ಆದರೆ ಹೈಕಮಾಂಡ್ ನಿರ್ದೇಶನದಂತೆ ಅಚ್ಚರಿಯ ರೀತಿಯಲ್ಲಿ ಗೋವಿಂದ ಕಾರಜೋಳ, ಅಶ್ವತನಾರಾಯಣ ಹಾಗೂ ಲಕ್ಷ್ಮಣ ಸವದಿ ಉಪ ಮುಖ್ಯಮಂತ್ರಿಗಳಾಗಿ ನೇಮಕಗೊಂಡಿದ್ದಾರೆ.
ಜಗದೀಶ್ ಶೆಟ್ಟರ್ ಹಾಗೂ ಕೆ.ಎಸ್. ಈಶ್ವರಪ್ಪ ಬಹಿರಂಗವಾಗಿ ತಮ್ಮ ಅಸಮಾಧಾನ ತೋರ್ಪಡಿಸಿಕೊಳ್ಳದಿದ್ದರೂ ಆರ್. ಅಶೋಕ್ ಮಾತ್ರ ಸರ್ಕಾರಿ ಕಾರನ್ನು ವಾಪಸ್ ಕಳುಹಿಸುವ ಮೂಲಕ ಪರೋಕ್ಷವಾಗಿ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆಂದು ಹೇಳಲಾಗಿದೆ. ಇನ್ನು ತನಗೆ ಬಯಸಿದ ಖಾತೆ ಸಿಗಲಿಲ್ಲವೆಂಬ ಅಸಮಾಧಾನ ಹೊಂದಿರುವ ಸಿ.ಟಿ. ರವಿ, ಸರಣಿ ಟ್ವೀಟ್ ಗಳನ್ನು ಮಾಡುವ ಮೂಲಕ ಸ್ವಾಭಿಮಾನಕ್ಕೆ ಧಕ್ಕೆ ಆದರೆ ರಾಜೀನಾಮೆ ನೀಡಲು ಸಿದ್ಧ ಎಂಬ ಪರೋಕ್ಷ ಸಂದೇಶ ರವಾನಿಸಿದ್ದಾರೆ. ಮುಂದಿನ ದಿನಗಳಲ್ಲಿ ಇದು ಯಾವ ಹಂತ ತಲುಪುತ್ತದೆಂಬುದನ್ನು ಕಾದುನೋಡಬೇಕಿದೆ.

Comments