ಟೆಲಿಫೋನ್ ಕದ್ದಾಲಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಬ್ಯಾಟ್ ಬೀಸಿದ್ದಾರೆ. ಅವರು ಇಂದು ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದರು, ಇದೇ ವೇಳೆ ಅವರು ಮಾತನಾಡುತ್ತ ಯಾವ ಫೋನ್ ಕೂಡ ಟ್ಯಾಪಿಂಗ್ ಆಗಿಲ್ಲ. ಮಾಧ್ಯಮಗಳಿಗೆ ಅದು ಹೇಗೆ ಸಿಗ್ತೋ ಗೊತ್ತಿಲ್ಲ ಅಂತ ಹೇಳಿದರು.
ಇನ್ನು ಫೋನ್ ಟ್ಯಾಪಿಂಗ್ ಬಗ್ಗೆ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಆರೋಪ ಮಾಡಿದ್ದಾರೆ. ಹಿಂದಿನ ಗೃಹ ಸಚಿವರಿಗೆ ರಾಜಕಾರಣ ಬೇಕಾಗಿದೆ. ಹಾಗಾಗಿ ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ. ನಮ್ಮ ಮೇಲೆಲ್ಲ ರೇಡ್ ಗಳು ನಡೆದಿದೆ. ಆಗ ನಮ್ಮ ಮೇಲೆ ಸುಖಾಸುಮ್ಮನೆ ಟ್ಯಾಪಿಂಗ್ ಮಾಡಿದ್ರಾ ಅಂತ ಹಾಲಿ ಶಾಸಕ, ಮಾಜಿ ಗೃಹ ಸಚಿವ ಆರ್. ಆಶೋಕ್ ಅವರನ್ನು ಪರೋಕ್ಷವಾಗಿ ಪ್ರಶ್ನೆ ಮಾಡಿದರು. ಇನ್ನು ಕೆಪಿಸಿಸಿ ಅಧ್ಯಕ್ಷರು, ಪದಾಧಿಕಾರಿಗಳ ನೇಮಕವನ್ನ ನಮ್ಮ ಹಿರಿಯ ನಾಯಕರು ನೋಡಿಕೊಳ್ಳುತ್ತಾರೆ. ನಾನು ಸೀನಿಯರ್ ಅಲ್ಲ, ನಾನೊಬ್ಬ ಜೂನಿಯರ್ ಶಾಸಕ. ಈಗ ಜನರ ಕೆಲಸ ಮಾಡೋಕೆ ಬಿಟ್ಟರೆ ಸಾಕು ನನಗೆ ನನಗೆ ಯಾವ ಕೆಪಿಸಿಸಿ ಅಧ್ಯಕ್ಷ ಸ್ಥಾನವೂ ಬೇಡ ಅಂತ ಅವರು ಹೇಳಿದರು
Comments
Post a Comment