ಇದೀಗ ಬಂದ ಸುದ್ದಿ: ಕಾಂಗ್ರೆಸ್ ಗೆ ಭರ್ಜರಿ ಗುಡ್ ನ್ಯೂಸ್, ದಾಖಲೆ ನಿರ್ಮಿಸಿದ ಮಹಿಳಾ ಸಂಸದೆ ಕಾಂಗ್ರೆಸ್ ಗೆ..?

ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರಕಾರ ಪತವಾಗಿದ್ದು, ಈ ನಡುವೆ ಸುಮಲತಾ ಅಂಬರೀಶ್‌ ಅವರು ತಮ್ಮ ಕಾಂಗ್ರೆಸ್‌ಗೆ ಸೇರಲಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿದ್ದಾವೆ. ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್‌ ಅವರ ಬೆಂಬಲಕ್ಕೆ ಬಿಜೆಪಿ ನಿಂತಿತ್ತು. ಆದರೆ ಮಂಡ್ಯದಲ್ಲಿ ಇನ್ನೂ ಬಿಜೆಪಿ ಸರಿಯಾಗಿ ನೆಲೆ ಕಾಣದ ನಿಟ್ಟಿನಲ್ಲಿ ತಮ್ಮ ಹಾಗೂ ತಮ್ಮ ಮಗ ಅಭಿಷೇಕ್‌ ಅವರ ರಾಜಕೀಯ ಭವಿಷ್ಯದಿಂದಾಗಿ ಅಲ್ಲದೇ ತಮ್ಮ ಪತಿ ದಿ.ಅಂಬರೀಶ್‌ ಅವರು ಇದ್ದ ಕಾಂಗ್ರೆಸ್‌ ಪಕ್ಷವನ್ನು ಸೇರಿಕೊಳ್ಳುವುದಕ್ಕೆ ಸುಮಲತಾ ಅವರು ಮನಸ್ಸು ಮಾಡಿದ್ದಾರೆ ಎನ್ನಲಾಗಿದೆ. ಇದಲ್ಲದೇ ಮದ್ದೂರು ವಿಧಾನಸಭಾ ಕ್ಷೇತ್ರದಿಂದ ಅಭಿಷೇಕ್‌ ಕೂಡ ಚುನಾವಣೆಯಲ್ಲಿ ಕಣಕ್ಕೆ ಇಳಿಯಲಿದ್ದಾರೆ ಎನ್ನಲಾಗುತ್ತಿದ್ದು, ಈ ಎಲ್ಲ ನಿಟ್ಟಿನಲ್ಲಿ ಸುಮಲತಾ ಅವರು ಕಾಂಗ್ರೆಸ್‌ನ ಕೈ ಹಿಡಿಯಲಿದ್ದಾರೆ ಎನ್ನಲಾಗುತ್ತಿದ್ದು, ಈ ಬಗ್ಗೆ ಸುಮಲತಾ ಅವರೇ ಅಧಿಕೃತವಾಗಿ ಘೋಷಣೆ ಮಾಡಬೇಕಾಗಿದೆ.

Comments