ಇದೀಗ ಬಂದ ಸುದ್ದಿ: ಸಂಪುಟ ವಿಸ್ತರಣೆಯ ಕುರಿತು ಅಧಿಕೃತ ಪತ್ರಿಕಾ ಪ್ರಕಟಣೆ ಹೊರಡಿಸಿದ ಸಿಎಂ ಯಡಿಯೂರಪ್ಪ.?

ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ನಾಳೆ ಸಂಜೆ ೫ ಗಂಟೆಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದು, ಸಂಪುಟ ವಿಸ್ತರಣೆ ಕುರಿತು ಗ್ರೀನ್ ಸಿಗ್ನಲ್ ಪಡೆಯುವುದಾಗಿ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಂಪುಟ ವಿಸ್ತರಣೆ ನಾಳೆ ಬಹುತೇಕ ಖಚಿತವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇನ್ನು ಇದೇ ವೇಳೆ, ಪ್ರಧಾನಿ ಅವರನ್ನು ಭೇಟಿಯಾದ ಬಗ್ಗೆಯೂ ತಿಳಿಸಿದ ಸಿಎಂ ಇಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಎದುರಾಗಿರುವ ಪ್ರವಾಹ ಪರಿಸ್ಥಿತಿ ಕುರಿತು ಸುಮಾರು 45 ನಿಮಿಷಗಳ ಕಾಲ ಮಚರ್ಚೆ ನಡೆಸಲಾಗಿದೆ. ಪ್ರವಾಹದಿಂದಾಗಿ 50-55ಸಾವಿರ ಕುಟುಂಬಗಳು ಹಾನಿಗೊಳಲಾಗಿದ್ದು, 65ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆಂದು ಪ್ರಧಾನಿ ಅವರಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದರು.

ಬಳಿಕ ರೈಲ್ವೆ ಸಚಿವರನ್ನು ಭೇಟಿ ಮಾಡಿದ್ದು, ಬಾಕಿ ಉಳಿದಿರುವ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು. ವಿಮಾನಯಾನ ಸಚಿವರನ್ನು ಭೇಟಿ ಮಾಡಿ ಕಲಬುರಗಿಯಲ್ಲಿ ವಿಮಾನನಿಲ್ದಾಣ ನಿರ್ಮಾಣ ಕುರಿತು ಚರ್ಚಿಸಲಾಯಿತು. ಅಲ್ಲದೇ, ಶಿವಮೊಗ್ಗ, ಹುಬ್ಬಳ್ಳಿ ವಿಮಾನನಿಲ್ದಾಣಗಳನ್ನು ಮೇಲ್ದರ್ಜೆಗೇರಿಸುವ ಬಗ್ಗೆಯೂ ಮಾತುಕತೆ ನಡೆಸಿದ್ದಾಗಿ ವಿವರಿಸಿದರು…

Comments