ನೆರೆ ಸಂತ್ರಸ್ತರಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ ಬೇರೆ ಕಡೆ ಜಮೀನು, ವಸತಿ ಕಲ್ಪಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿಸಿದ್ದಾರೆ.
ಇಂದು ಚಿಕ್ಕಮಗಳೂರಿನ ನೆರೆ ಪ್ರವಾಹಕ್ಕೆ ತುತ್ತಾಗಿರುವ ಪ್ರದೇಶಗಳ ಪರಿಶೀಲನೆ ಬಳಿಕ ಮಾತನಾಡಿದ ಸಿಎಂ ಬಿಎಸ್ ವೈ, ಮೂಡಿಗೆರೆ ತಾಲೂಕಿನಲ್ಲಿ ಸಾಕಷ್ಟು ಹಾನಿಯಾಗಿದೆ. ಗೊತ್ತೇ ಸಿಗದ ರೀತಿ ಕಾಫಿ, ಅಡಿಕೆ ತೋಟ ಹಾನಿಯಾಗಿದೆ. ಇಲ್ಲಿನ ಸ್ಥಿತಿ ಕುರಿತು ವರದಿ ಸಮೇತ ಬೆಂಗಳೂರಿಗೆ ಬರಲು ಡಿಸಿಗೆ ಸೂಚನೆ ನೀಡಿದ್ದೇನೆ ಎಂದರು.
ನಿರ್ಗತಿಕರಿಗೆ ಸೂರು ಕಲ್ಪಿಸುವುದು ನಮ್ಮ ಮೊದಲ ಆದ್ಯತೆ. ಕೇಂದ್ರದ ನೆರವಿನೊಂದಿಗೆ ಅಭಿವೃದ್ಧಿಗೆ ಎಷ್ಟು ಹಣ ಬೇಕಾದರೂ ಕೊಡಲು ಸಿದ್ದರಿದ್ದೇವೆ. ನೆರೆ ಕುರಿತು ಅಧಿವೇಶನಕ್ಕೆ ಕರೆಯುವಂತೆ ಸಿದ್ದರಾಮಯ್ಯ ಹೇಳಿದ್ದಾರೆ. ಅಧಿವೇಶನ ಕರೆಯುವುದಕ್ಕೆ ಯಾವುದೇ ಅಭ್ಯಂತರವಿಲ್ಲ, ಅಧಿವೇಶನ ಕರೆದು ಚರ್ಚೆ ಮಾಡುತ್ತೇನೆ ಎಂದರು.

Comments
Post a Comment