ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಕುಮಾರಸ್ವಾಮಿ ಅವರು ಮಾಡಿರುವ ಆರೋಪಗಳಲ್ಲಿ ಸತ್ಯಾಂಶವಿಲ್ಲ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸಿದ್ದು ಪರ ಬ್ಯಾಟಿಂಗ್ ಮಾಡಿದ್ದಾರೆ. ಸಿದ್ದರಾಮಯ್ಯ ನಿಷ್ಟಾವಂತ ನಾಯಕ ಅವರು ಮತ್ತೊಬ್ಬರಿಗೆ ಮೋಸ ಮಾಡುವುದಿಲ್ಲ ಎಂತಲೂ ಅವರು ತಿಳಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಕುಮಾರ್, ದೇವೇಗೌಡ ಅವರು ರಾಜ ಕೀಯ ದೃಷ್ಟಿಯಿಂದ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸುವುದಿಲ್ಲ. ದೊಡ್ಡವರು ಬೈದರೆ ಆಶೀರ್ವಾದ ಎಂದು ತಿಳಿಯುತ್ತೇನೆ. ಚಿಕ್ಕವರು ಬೈದರೆ ನಾನು ಆಶೀರ್ವಾದ ಮಾಡುತ್ತೇನೆ ಎಂದರು. ಇನ್ನು ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ಅವರೇ ಸೂಕ್ತ ವ್ಯಕ್ತಿ ಎಂದು ರಮೇಶ್ ಕುಮಾರ್ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ…
Comments
Post a Comment