ಇದೀಗ ಬಂದ ಸುದ್ದಿ: ಮತ್ತೊಂದು ಸ್ಪೋಟಕ ಹೇಳಿಕೆ ನೀಡಿದ ಮಾಜಿ ಪ್ರಧಾನಿ ಎಚ್ ಡಿ ದೇವೆಗೌಡ.?

ಸಿದ್ದರಾಮಯ್ಯ ವಿರುದ್ಧ ಕೆಲವು ದಿನಗಳ ಹಿಂದಷ್ಟೆ ತೀವ್ರ ಆಕ್ರೋಶ ಹೊರಹಾಕಿದ್ದ ದೇವೇಗೌಡ ಅವರು ಮತ್ತೆ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮಾತನ್ನಾಡಿದ್ದಾರೆ. ಇಂದು ಹಾಸನ, ಹೊಳೆನರಸೀಪುರದ ರಂಗನಾಥ ಸ್ವಾಮಿ ದೇವಾಲಯಕ್ಕೆ ಆಗಮಿಸಿದ್ದ ಅವರು ನಂತರ ಸುದ್ದಿಗಾರರೊಂದಿಗೆ ರಾಜ್ಯ ರಾಜಕಾರಣ ಕುರಿತು ಮಾತನಾಡಿದರು. ಸೋನಿಯಾ ಗಾಂಧಿ ಅವರು ಹೇಳಿದರೆ ಮುಂದಿನ ಚುನಾವಣೆಗಳಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಗೆ ಸಿದ್ಧ ಎಂದು ದೇವೇಗೌಡ ಅವರು ಈ ಸಮಯದಲ್ಲಿ ಹೇಳಿದರು.

ಸೋನಿಯಾಗಾಂಧಿ ಅವರು ಎಐಸಿಸಿ ಅಧ್ಯಕ್ಷರಾಗಿ ಹೊಸ ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಎಲ್ಲಾ ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸಿಕೊಂಡು ಹೋಗೋಣ ಎಂದಿದ್ದಾರೆ. ಮುಂದೆ ಯಾವ ತೀರ್ಮಾನ ಮಾಡುತ್ತಾರೆ ಕಾದು ನೋಡೋಣ ಎಂದರು. ಸೋನಿಯಾಗಾಂಧಿ ಅವರು ಹೊಸ ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಎಲ್ಲಾ ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸಿಕೊಂಡು ಹೋಗೋಣ ಎಂದಿದ್ದಾರೆ. ಮುಂದೆ ಯಾವ ತೀರ್ಮಾನ ಮಾಡುತ್ತಾರೆ ಕಾದು ನೋಡೋಣ ಎಂದರು.

Comments