ಸ್ಪೋಟಕ ಬ್ರೇಕಿಂಗ್: ಸಿದ್ದರಾಮಯ್ಯ ವಿರುದ್ದ ಮತ್ತೊಂದು ಹೊಸ ಬಾಂಬ್ ಸಿಡಿಸಿದ ಎಚ್ ಡಿ ಕುಮಾರಸ್ವಾಮಿ.?

ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಪತನವಾದ ಬೆನ್ನಲ್ಲೆ ಉಭಯ ಪಕ್ಷಗಳ ನಾಯಕರ ನಡುವೆ ಆರೋಪ-ಪ್ರತ್ಯಾರೋಪ ಶುರುವಾಗಿದೆ. ಜೆಡಿಎಸ್ ವರಿಷ್ಠ ದೇವೇಗೌಡರು, ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ನಡುವೆ ಮಾತಿನ ಸಮರ ಮುಂದುವರೆದಿದೆ. ಸಂದರ್ಶನವೊಂದರಲ್ಲಿ ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ನನ್ನ ಮೊದಲ ಶತ್ರು ಬಿಜೆಪಿಯಲ್ಲ, ಸಿದ್ದರಾಮಯ್ಯ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಅವರು, ನಾನು ಸಿಎಂ ಆಗಿದ್ದನ್ನು ಸಹಿಸಿಕೊಳ್ಳಲು ಸಿದ್ದರಾಮಯ್ಯನವರಿಗೆ ಸಾಧ್ಯವಾಗಲಿಲ್ಲ. ಹಾಗಾಗಿಯೇ ಸರ್ಕಾರ ಉರುಳಿಸಿದ್ದಾರೆ ಎಂದು ಆರೋಪ ಮಾಡಿದ್ದಾರೆ. ತಮ್ಮ ಆಪ್ತ ಶಾಸಕರನ್ನು ನನ್ನ ವಿರುದ್ಧ, ಸಮ್ಮಿಶ್ರ ಸರ್ಕಾರದ ವಿರುದ್ಧ ಎತ್ತಿಕಟ್ಟುವ ಕೆಲಸ ಮಾಡಿಕೊಂಡು ಬಂದಿದ್ದರು. ಮೈತ್ರಿ ಸರ್ಕಾರ ಮುಂದುವರೆಯಬೇಕೆನ್ನುವುದು ಕಾಂಗ್ರೆಸ್ ವರಿಷ್ಠರ ತೀರ್ಮಾನವಾಗಿತ್ತು. ಆದರೆ, ಸಿದ್ದರಾಮಯ್ಯನವರಿಗೆ ಸರ್ಕಾರ ಮುಂದುವರಿಯುವುದು ಇಷ್ಟವಿರಲಿಲ್ಲ ಎಂದು ದೂರಿದ್ದಾರೆ. ಇನ್ನು ನಾನು ಮುಖ್ಯಮಂತ್ರಿಯಾಗಿ ಕೈಗೊಂಡ ಕೆಲವು ತೀರ್ಮಾನಗಳನ್ನು ಸಿದ್ದರಾಮಯ್ಯ ಸಹಿಸಿಕೊಳ್ಳಲಿಲ್ಲ ಎಂದು ಆರೋಪಿಸಿದ್ದಾರೆ.

Comments