ಪಾಕಿಸ್ತಾನದ ವಿರುದ್ಧ ಯುದ್ಧ ಸಾರಲು ಮತ್ತೊಂದು ಅಸ್ತ್ರ ಶೀಘ್ರ ಭಾರತೀಯ ಸೇನೆಗೆ ಸೇರ್ಪಡೆಯಾಗಲಿದೆ. ಈ ಕುರಿತು ಖುದ್ದಾಗಿ ಪ್ರಧಾನಿ ನರೇಂದ್ರ ಮೋದಿಯವರೇ ಪ್ಯಾರಿಸ್‌ನಲ್ಲಿ ಮಾಹಿತಿ ನೀಡಿದ್ದಾರೆ. ವಿಶ್ವದಲ್ಲಿಯೇ ಅತ್ಯಂತ ಬಲಿಷ್ಠ ಶಕ್ತಿಶಾಲಿ ಯುದ್ಧ ವಿಮಾನ ಎನಿಸಿರುವ ರಫೆಲ್ ಯುದ್ಧ ವಿಮಾನ ಮುಂದಿನ ತಿಂಗಳು ಭಾರತಕ್ಕೆ ಆಗಮಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ರಫೆಲ್ ಯುದ್ಧ ವಿಮಾನಗಳು ಶೀಘ್ರ ಭಾರತದ ಬಳಿ ಇರುವ ಮಿರಾಜ್ -2000 ಯುದ್ದ ವಿಮಾನಗಳಿಗಿಂತಲೂ ಬಲಶಾಲಿಯಾಗಿವೆ. ಆಗಾಗ ಅಣುಬಾಂಬ್ ಬೆದರಿಕೆಯ ಮಾತುಗಳನ್ನಾಡುವ ಪಾಕಿಸ್ತಾನವು ಪ್ರಧಾನಿ ನರೇಂದ್ರ ಮೋದಿ ಅವರ ಈ ಹೇಳಿಕೆಯಿಂದ ಪಾಕಿಸ್ತಾನ ನಡುಗಿದೆ.
ಸೆಪ್ಟೆಂಬರ್‌ನಲ್ಲಿ 36 ರಫೆಲ್ ಯುದ್ಧ ವಿಮಾನವನ್ನು ಭಾರತಕ್ಕೆ ಹಸ್ತಾಂತರಿಸುತ್ತಿರುವುದರಿಂದ ಸಂತಸವಾಗಿದೆ ಎಂದು ಫ್ರಾನ್ಸ್ ಅಧ್ಯಕ್ಷ ಇಮ್ಯಾನುವೆಲ್ ಮ್ಯಾಕ್ರೋನ್ ಜೊತೆಗಿನ ದ್ವೀಪಕ್ಷೀಯ ಮಾತುಕತೆ ವೇಳೆಯಲ್ಲಿ ನರೇಂದ್ರ ಮೋದಿ ತಿಳಿಸಿದ್ದಾರೆ.
ತುರ್ತು ಅಗತ್ಯಗಳನ್ನು ಪೂರೈಸಿಕೊಳ್ಳಲು 2016 ಸೆಪ್ಟೆಂಬರ್ ತಿಂಗಳಲ್ಲಿ ಫ್ರೆಂಚ್ ಸರ್ಕಾರ ಹಾಗೂ ಡಾಸಾಲ್ಟ್ ವಿಮಾನಯಾನ ಕಂಪನಿಯೊಂದಿಗೆ ಸುಮಾರು 7.8 ಶತಕೋಟಿಗೂ ಹೆಚ್ಚಿನ ಮೊತ್ತದಲ್ಲಿ 36 ರಾಫೆಲ್ ಯುದ್ಧ ವಿಮಾನ ಖರೀದಿಗೆ ಭಾರತ ಒಪ್ಪಂದ ಮಾಡಿಕೊಂಡಿತ್ತು.
Comments
Post a Comment