ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರನ್ನು ಬಹುವಾಗಿ ಕಾಡುತ್ತಿದ್ದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ದೊಡ್ಡ ನೆಮ್ಮದಿಯ ಸುದ್ದಿ ಸಿಕ್ಕಿದೆ. ಜಂತಕಲ್ ಅಕ್ರಮ ಮೈನಿಂಗ್ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಕೈಗೊಂಡಿದ್ದ ವಿಶೇಷ ತನಿಖಾ ತಂಡ(ಎಸ್ಐಟಿ) ಸಲ್ಲಿಸಿದ್ದ ಹೊಸ ಚಾರ್ಜ್ಶೀಟ್ ನಲ್ಲಿ ಎಚ್ ಡಿ ಕುಮಾರಸ್ವಾಮಿ ಅವರ ಹೆಸರು ಉಲ್ಲೇಖಿಸಿಲ್ಲ.
"ಜಂತಕಲ್ ಅಕ್ರಮ ಮೈನಿಂಗ್ ಪ್ರಕರಣದಲ್ಲಿ ಕುಮಾರಸ್ವಾಮಿ ಶಾಮೀಲಾಗಿದ್ದಾರೆ" ಎಂದು ಆರೋಪಿಸಲಾಗಿತ್ತು. ದಾವಣಗೆರೆ ಜಿಲ್ಲೆ ಚನ್ನಗಿರಿಯ ಸಾಮಾಜಿಕ ಕಾರ್ಯಕರ್ತ ಹರೀಶ ಹಳ್ಳಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಸಿಎಂ, ಕಾನೂನು ಇಲಾಖೆ ಕಾರ್ಯದರ್ಶಿ, ಲೋಕಾಯುಕ್ತ ರಿಜಿಸ್ಟ್ರಾರ್ ಅವರನ್ನು ಪ್ರತಿವಾದಿಗಳಾಗಿಸಲಾಗಿತ್ತು.
ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಐಪಿಸಿ ಸೆಕ್ಷನ್ 420, 465,467,468, 471 ಹಾಗೂ 120 (ಬಿ) ಮತ್ತು ಭ್ರಷ್ಟಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಆದರೆ, ಮಾಜಿ ಮುಖ್ಯಮಂತ್ರಿ ವಿರುದ್ಧ ಯಾವುದೇ ಸೂಕ್ತ ಸಾಕ್ಷ್ಯ ಸಿಗದ ಕಾರಣ ಅವರ ಹೆಸರನ್ನು ದೋಷರೋಪಣ ಪಟ್ಟಿಯಿಂದ ಹೊರಗಿಡಲಾಗಿದೆ.
ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಸಲ್ಲಿಸಿರುವ ಅಕ್ರಮ ಗಣಿಗಾರಿಕೆ ವರದಿಯಲ್ಲಿ ಉಲ್ಲೇಖಿಸಿದ್ದಾರೆ, ಇದೇ ವರದಿ ಆಧರಿಸಿ ವಕೀಲ ವಿನೋದ್ ಕುಮಾರ್ ಮತ್ತು ಸಾಮಾಜಿಕ ಹೋರಾಟಗಾರ ಟಿ.ಜೆ. ಅಬ್ರಾಹಂ ಅವರು ಲೋಕಾಯುಕ್ತಕ್ಕೆ ಖಾಸಗಿ ದೂರು ಸಲ್ಲಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಜಂತಕಲ್ ಮೈನಿಂಗ್ ಕಂಪನಿ ವ್ಯವಸ್ಥಾಪಕ ನಿರ್ದೇಶಕರ ವಿರುದ್ಧ ದೂರು ದಾಖಲಾಗಿತ್ತು. ಪ್ರಕರಣ ರದ್ದುಗೊಳಿಸುವಂತೆ ಕುಮಾರಸ್ವಾಮಿ ಹೈಕೋರ್ಟ್ ಮೊರೆ ಹೋಗಿದ್ದರು. ಕೋರ್ಟ್ ಪ್ರಕರಣದ ರದ್ದು ಮಾಡಿತ್ತು. ಕುಮಾರಸ್ವಾಮಿ ಸೇರಿದಂತೆ ಎಲ್ಲಾ ಆರೋಪಿಗಳು ಪ್ರಕರಣದಲ್ಲಿ ಜಾಮೀನು ಪಡೆದಿದ್ದಾರೆ.
ಆರೋಪಿ ಸ್ಥಾನದಲ್ಲಿರುವ ಕುಮಾರಸ್ವಾಮಿ ಅವರು ತಮ್ಮ ಪ್ರಭಾವ ಬೀರಿ ದೋಷಾರೋಪ ಪಟ್ಟಿ ಸಲ್ಲಿಕೆ ಆಗದಂತೆ ಮಾಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಹೀಗಾಗಿ, ಸಿಎಂ ವಿರುದ್ಧ ತಕ್ಷಣ ಅಧೀನ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿ, ಕಾನೂನು ರೀತಿ ಕ್ರಮ ಜರುಗಿಸಲು ಲೋಕಾಯುಕ್ತ ಸಂಸ್ಥೆಗೆ ನಿರ್ದೇಶಿಸಬೇಕೆಂದು ಅರ್ಜಿದಾರರು ಕೋರಿದ್ದಾರೆ.
Comments
Post a Comment