ಟೆಲಿಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿರುವುದು ಸ್ವಾಗತಾರ್ಹ. ಇದರಿಂದ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಆತಂಕ ಶುರುವಾಗಿದೆ ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ.
ಇಂದು ಸಿಎಂ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಗೆ ಮಾತನಾಡಿದ ಅವರು, ಕಾಂಗ್ರೆಸ್ ಒಡೆದು ಹೋಳಾಗಿದೆ. ಅವರೆಲ್ಲ ದ್ವಂದ್ವ ಹೇಳಿಕೆ ಕೊಡುತ್ತಿದ್ದಾರೆಂದು ಕಿಡಿಕಾರಿದರು. ಕುಮಾರಸ್ವಾಮಿ ಅವರಿಗೆ ಆತಂಕ ಶುರುವಾಗಿದೆ ಎನಿಸುತ್ತದೆ. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆ ಆಗಲೇಬೇಕೆಂದು ಅವರು ಒತ್ತಾಯಿಸಿದರು.
ಯಡಿಯೂರಪ್ಪ ಅವರನ್ನು ಭೇಟಿ ಮಾಡಲು ಬರುವವರೆಲ್ಲ ಬಿಜೆಪಿ ಸೇರಲು ಬರುತ್ತಾರೆಂಬುದು ತಪ್ಪು. ಹುಣಸೂರು ಕ್ಷೇತ್ರವನ್ನು ನೆರೆಪರಿಹಾರ ಪಟ್ಟಿಯಲ್ಲಿ ಸೇರಿಸಿದ್ದಕ್ಕೆ ಧನ್ಯವಾದ ಹೇಳುವುದಕ್ಕಾಗಿ ಆಗಮಿಸಿದ್ದಾಗಿ ತಿಳಿಸಿದರು…
Comments
Post a Comment