ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇನ್ನೂ ಮೂರು ವರ್ಷ ಹತ್ತು ತಿಂಗಳು ಸಿಎಂ ಆಗಿ ಅಧಿಕಾರದಲ್ಲಿ ಇರುತ್ತಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಕಾಂಗ್ರೆಸ್ ಅಧಿಕಾರದಲ್ಲಿಲ್ಲ. ಅಧಿಕಾರ ಇದ್ದಾಗ ಕಾಂಗ್ರೆಸ್ ಮತ್ತು ಜೆಡಿಎಸ್ ನವರು ಜಗಳ ಮಾಡಿದರು. ಈಗ ಅಧಿಕಾರ ಇಲ್ಲದೆ ಹತಾಶರಾಗಿದ್ದಾರೆ ಎಂದು ವ್ಯಂಗ್ಯವಾಡಿದರು.
ಇನ್ನು ಪ್ರವಾಹ ಪೀಡಿತ ಹಾವೇರಿ ಜಿಲ್ಲೆಗೆ ನಿನ್ನೆ ಭೇಟಿ ನೀಡಿದ ಸಿಎಂ ಯಡಿಯೂರಪ್ಪ ಜೊತೆಗೆ ಆಗಮಿಸಿದ್ದ ಆರ್. ಅಶೋಕ್ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ ಮಾಡಿ ಪರಿಹಾರದ ಭರವಸೆ ನೀಡಿದರು.
ಇನ್ನು ಪ್ರವಾಹ ಪೀಡಿತ ಹಾವೇರಿ ಜಿಲ್ಲೆಗೆ ನಿನ್ನೆ ಭೇಟಿ ನೀಡಿದ ಸಿಎಂ ಯಡಿಯೂರಪ್ಪ ಜೊತೆಗೆ ಆಗಮಿಸಿದ್ದ ಆರ್. ಅಶೋಕ್ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ ಮಾಡಿ ಪರಿಹಾರದ ಭರವಸೆ ನೀಡಿದರು.
Comments
Post a Comment