ಇನ್ನು ಐದಾರು ತಿಂಗಳಲ್ಲಿ ಬಿಜೆಪಿ ಸರ್ಕಾರ ಬಿದ್ದು ಹೋಗುತ್ತದೆ. ಬಿಜೆಪಿಯಲ್ಲಿ ಆಂತರಿಕವಾಗಿ ಭಿನ್ನಮತ ಭುಗಿಲೆದ್ದಿದೆ. ಹೀಗಾಗಿ ಈ ಸರ್ಕಾರ ಹೆಚ್ಚು ದಿನ ಉಳಿಯೋದಿಲ್ಲ ಎಂದು ಶಾಸಕ ಕೆ.ವೈ.ನಂಜೇಗೌಡ ಭವಿಷ್ಯ ನುಡಿದಿದ್ದಾರೆ. ಕೋಲಾರದ ಜಿಲ್ಲಾ ಪಂಚಾಯಿತಿ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ನಂಜೇಗೌಡ ಅವರು, ಇನ್ನು ಐದಾರು ತಿಂಗಳಲ್ಲಿ ಬಿಜೆಪಿ ಸರ್ಕಾರ ಬಿದ್ದು ಹೋಗುತ್ತದೆ. ಮಧ್ಯಂತರ ಚುನಾವಣೆಗೆ ಸಿದ್ದರಾಗಿ ಎಂದು ಹೈಕಮಾಂಡ್ ನಮಗೆ ಸೂಚನೆ ಕೊಟ್ಟಿದೆ ಎಂದು ಹೇಳಿದರು. ಬಿಜೆಪಿ ಸರ್ಕಾರದಲ್ಲಿ ಸಚಿವ ಸ್ಥಾನ ಹಾಗೂ ಖಾತೆ ವಿಚಾರವಾಗಿ ಅಸಮಾಧಾನ ಉಂಟಾಗಿದೆ. ಹೀಗಾಗಿ ಈ ಸರ್ಕಾರ ಹೆಚ್ಚು ದಿನ ನಡೆಯುವುದು ಅನುಮಾನ. ರಾಜ್ಯದಲ್ಲಿ ಸರ್ಕಾರ ಇದೆಯಾ ಇಲ್ಲವಾ ಎಂಬ ಅನುಮಾನ ಜನಸಾಮಾನ್ಯರಲ್ಲಿ ಉಂಟಾಗಿದೆ ಎಂದರು.
17 ಶಾಸಕರಿಂದ ರಾಜಿನಾಮೆ ಕೊಡಿಸಿ ಅವರನ್ನು ಅತಂತ್ರರನ್ನಾಗಿ ಮಾಡಿದ್ದಾರೆ. ಅನರ್ಹಗೊಂಡ ಶಾಸಕರ ಕ್ಷೇತ್ರಗಳಲ್ಲೂ ಮರುಚುನಾವಣೆ ನಡೆಯುವ ವೇಳೆಗೆ ರಾಜ್ಯದಲ್ಲಿ ಚುನಾವಣೆ ನಡೆಯಬಹುದು. ಮತ್ತೆ ಚುನಾವಣೆ ನಡೆದರೆ ಕಾಂಗ್ರೆಸ್ ಮೆಜಾರಿಟಿಯಲ್ಲಿ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು…
Comments
Post a Comment