ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ (ಮನ್ಮುಲ್) ಆಡಳಿತ ಮಂಡಳಿ ನಿರ್ದೇಶಕ ಸ್ಥಾನಗಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಮೇಲುಗೈ ಸಾಧಿಸಿದರೆ, ಬಿಜೆಪಿಯ ರೂಪಾ ಗೆಲುವು ಸಾಧಿಸುವ ಮೂಲಕ ಕಮಲ ಪಕ್ಷ ಮೊದಲ ಬಾರಿ ಖಾತೆ ತೆರೆದಿದೆ.
ಅಲ್ಲದೇ ಮನ್ಮುಲ್ನ ನಿರ್ದೇಶಕಿಯಾಗಿ ಆಯ್ಕೆಗೊಂಡ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೂ ಮದ್ದೂರಿನ ರೂಪ ಪಾತ್ರರಾಗಿದ್ದರೆ. ಇದರೊಂದಿಗೆ ಕಳೆದ ಬಾರಿ ಮನ್ಮುಲ್ನ ಅಧಿಕಾರ ಹಿಡಿದಿದ್ದ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದೆ.
ಮನ್ಮುಲ್ನ ಒಟ್ಟು 12 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಜೆಡಿಎಸ್ 8, ಕಾಂಗ್ರೆಸ್ 3 ಹಾಗೂ ಬಿಜೆಪಿ 1 ಸ್ಥಾನ ಪಡೆದುಕೊಂಡಿದೆ. ಇದರೊಂದಿಗೆ 8 ಸ್ಥಾನ ಪಡೆದಿರುವ ಜೆಡಿಎಸ್ ಮನ್ಮುಲ್ ಅಧಿಕಾರ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ.
Comments
Post a Comment