ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ಹೊಸಪೇಟೆಯನ್ನು ನೂತನ ಜಿಲ್ಲೆಯನ್ನಾಗಿಸಲು ರಾಜ್ಯ ಸರ್ಕಾರ ಪ್ರಕ್ರಿಯೆ ಆರಂಭಿಸಿದ್ದು, ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ, ಒಂದೊಮ್ಮೆ ಅಖಂಡ ಬಳ್ಳಾರಿ ಜಿಲ್ಲೆ ವಿಭಜನೆಯಾದರೆ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಮೂಲಗಳ ಪ್ರಕಾರ ನವೆಂಬರ್ 1ರಂದು ನೂತನ ಹೊಸಪೇಟೆ ಜಿಲ್ಲೆ ಘೋಷಣೆಯಾಗುತ್ತದೆ ಎಂದು ಹೇಳಲಾಗಿದ್ದು, ಇದಕ್ಕೆ ಬಳ್ಳಾರಿ ಜಿಲ್ಲೆಯ ನಾಲ್ವರು ಬಿಜೆಪಿ ಶಾಸಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಸೋಮಶೇಖರ ರೆಡ್ಡಿ ಬಳ್ಳಾರಿ ಜಿಲ್ಲೆ ವಿಭಜನೆಯಾದರೆ ನಾಲ್ವರು ಬಿಜೆಪಿ ಶಾಸಕರು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಹೇಳಿದ್ದಾರೆ.
ಆನಂದ್ ಸಿಂಗ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಂದರ್ಭದಲ್ಲೇ ಹೊಸಪೇಟೆಯನ್ನು ಜಿಲ್ಲೆಯನ್ನಾಗಿಸುವ ಕುರಿತು ಬೇಡಿಕೆ ಮಂಡಿಸಿದ್ದರೆನ್ನಲಾಗಿದ್ದು, ಇದಕ್ಕೆ ಮಣಿದಿರುವ ಯಡಿಯೂರಪ್ಪ ಈಗ ಈ ಪ್ರಕ್ರಿಯೆಗೆ ಚಾಲನೆ ನೀಡಿದ್ದಾರೆ ಎಂದು ಹೇಳಲಾಗಿದೆ. ಆನಂದ್ ಸಿಂಗ್ ರಾಜೀನಾಮೆ ನೀಡಿ ಸರ್ಕಾರ ರಚಿಸಲು ಕಾರಣರಾದರೆಂಬ ಕಾರಣಕ್ಕೆ ಬಳ್ಳಾರಿ ಜಿಲ್ಲೆ ವಿಭಜನೆಗೆ ಮುಂದಾದರೆ ನಾವೂ ರಾಜೀನಾಮೆ ನೀಡಬೇಕಾಗುತ್ತದೆ ಎಂಬುದು ಸೋಮಶೇಖರ್ ರೆಡ್ಡಿ ಸೇರಿದಂತೆ ಬಿಜೆಪಿ ಶಾಸಕರುಗಳ ನಿಲುವಾಗಿದೆ.

Comments
Post a Comment