ನವದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯ (ಇಡಿ) ವಿಶೇಷ ನ್ಯಾಯಾಲಯ ಡಿ. ಕೆ. ಶಿವಕುಮಾರ್ ಜಾಮೀನು ಅರ್ಜಿಯ ವಾದವನ್ನು ಆಲಿಸಿದ್ದು, ತೀರ್ಪನ್ನು ಮಂಗಳವಾರಕ್ಕೆ ಕಾಯ್ದಿರಿಸಿತ್ತು. ತೀರ್ಪು ಪ್ರಕಟವಾಗಲಿದ್ದು, ಜಾಮೀನು ಸಿಗಲಿದೆಯೇ? ಕಾದು ನೋಡಬೇಕು. ಸತತ ನಾಲ್ಕು ದಿನಗಳ ವಿಚಾರಣೆ ಬಳಿಕ ಸೆಪ್ಟೆಂಬರ್ 3ರಂದು ಜಾರಿ ನಿರ್ದೇಶನಾಲಯ ಡಿ. ಕೆ. ಶಿವಕುಮಾರ್ ಬಂಧಿಸಿತ್ತು. ಪ್ರಸ್ತುತ ಅವರು ನ್ಯಾಯಾಂಗ ಬಂಧನದಲ್ಲಿದ್ದು, ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ.
ಡಿ. ಕೆ. ಶಿವಕುಮಾರ್‌ಗೆ ಜಾಮೀನು ಸಿಗಲಿದೆ. ಅವರು ಬಿಡುಗಡೆಯಾಗಲಿದ್ದಾರೆ ಎಂದು ಅವರ ಅಪಾರ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಡಿ. ಕೆ. ಶಿವಕುಮಾರ್ ಪರವಾಗಿ ತೀರ್ಪು ಬರಲಿ ಎಂದು ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇಡಿ ವಿಶೇಷ ನ್ಯಾಯಾಲಯದಲ್ಲಿ ಜಾಮೀನು ಸಿಗದಿದ್ದರೆ ಡಿ. ಕೆ. ಶಿವಕುಮಾರ್ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಬೇಕಿದೆ.
Comments
Post a Comment