ಜೆಡಿಎಸ್ ಚುನಾವಣಾ ಉಸ್ತುವಾರಿಯಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ. ಹೌದು, ಉಪಚುನಾವಣೆಯಲ್ಲಿ ಚಿಕ್ಕಬಳ್ಳಾಪುರದ ಅನರ್ಹ ಶಾಸಕರಾದ ಸುಧಾಕರ್ ಅವರನ್ನ ಸೋಲಿಸಲೇಬೇಕು ಅಂತ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ತಮ್ಮ ಮಗ ನಿಖಿಲ್ ಕುಮಾರಸ್ವಾಮಿ ಅವರನ್ನೇ ಕ್ಷೇತ್ರದ ಉಸ್ತುವಾರಿಯನ್ನಾಗಿ ನೇಮಕ ಮಾಡಿದ್ದಾರೆ.
ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಸುಧಾಕರ್ ನಡೆದುಕೊಂಡ ರೀತಿ ಅನ್ನೋದು ಮಾಜಿ ಸಿಎಂ ಆಪ್ತವಲಯದವರ ಮಾತು. ಹೀಗಾಗಿ ಉಪಚುನಾವಣೆಯಲ್ಲಿ ಅನರ್ಹ ಶಾಸಕ ಸುಧಾಕರ್ ವಿರುದ್ಧ ಸೇಡು ತೀರಿಸಿಕೊಳ್ಳೋಕೆ ಕುಮಾರಸ್ವಾಮಿ ತಮ್ಮ ಮಗನನ್ನೇ ಈಗ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿಯಾಗಿ ನೇಮಕ ಮಾಡಿದ್ದಾರೆ.
Comments
Post a Comment