ಈಗ ಘೋಷಣೆಯಾದ ಉಪ ಚುನಾವಣೆ ಮುಂದೂಡಬಹುದು. ಚುನಾವಣೆ ನಡೆದರೆ ಹುಣಸೂರಿನಿಂದ ನಾನೇ ಸ್ಪರ್ಧಿಸುತ್ತೇನೆ ಎಂದು ಅನರ್ಹ ಶಾಸಕ ಹೆಚ್. ವಿಶ್ವನಾಥ್ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಶಾಸಕರ ಅನರ್ಹತೆ ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿ ಇದೆ. ಈಗಿರುವ ಪೀಠದಿಂದ ನಮ್ಮ ಕೇಸ್ ವರ್ಗಾವಣೆ ಆಗಬಹುದು. ಸಾಂವಿಧಾನಿಕ ಪೀಠಕ್ಕೆ ಪ್ರಕರಣ ವರ್ಗಾವಣೆ ಆಗಬಹುದು. ಪರಿಸ್ಥಿತಿ ಹೀಗಿರುವಾಗ ಯಾರೋ ವದಂತಿಯನ್ನು ಹಬ್ಬಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಹುಣಸೂರು ಕ್ಷೇತ್ರದ ಟಿಕೆಟ್ ಬೇರೆಯವರಿಗೆ ಕೊಡಲಾಗುತ್ತದೆ ಎಂದು ವದಂತಿ ಹಬ್ಬಿಸುತ್ತಿದ್ದಾರೆ. ಯಾವ ಶಾಸಕ ಕ್ಷೇತ್ರ ಬಿಟ್ಟು ಕೊಡುವುದಿಲ್ಲ. ಗೆದ್ದಿರುವ ಕ್ಷೇತ್ರ ಆ ಶಾಸಕನ ಜೀವನವಾಗಿರುತ್ತದೆ. ಚುನಾವಣೆ ನಡೆದಲ್ಲಿ ಹುಣಸೂರಿನಿಂದ ನಾನೇ ಸ್ಪರ್ಧೆ ಮಾಡುತ್ತೇನೆ. ಈ ವಿಚಾರವಾಗಿ ತೀರ್ಮಾನ ಸಹ ಮಾಡಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.
ಬಿಜೆಪಿ ಹೈಕಮಾಂಡ್ ಬಹಳ ಗಟ್ಟಿಯಾಗಿದೆ. ಸೂಕ್ತ ಸಮಯದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳಲಿದ್ದಾರೆ. ಮುಖ್ಯಮಂತ್ರಿ ಭೇಟಿಯ ವೇಳೆ ನಾನು ಚುನಾವಣೆ ಬಗ್ಗೆ ಚರ್ಚೆ ಮಾಡಿಲ್ಲ. ಇನ್ನು ಮುಖ್ಯಮಂತ್ರಿಯವರು ನನ್ನ ಮನವೊಲಿಸುವ ಪ್ರಶ್ನೆ ಎಲ್ಲಿಂದ ಬಂತು ಎಂದು ತಿಳಿಸಿದ್ದಾರೆ.
Comments
Post a Comment