ಜೆಡಿಎಸ್ ಪಕ್ಷಕ್ಕೆ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಅನರ್ಹಗೊಂಡಿರುವ ನಾರಾಯಣಗೌಡ ಅವರು ಪ್ರತಿನಿಧಿಸುತ್ತಿದ್ದ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆಯೇ?
ಈ ಬಗ್ಗೆ ಕ್ಷೇತ್ರದಲ್ಲಿ ಗುಸುಗುಸು ಮಾತುಗಳು ಕೇಳಿ ಬರುತ್ತಿವೆ. ಒಂದು ವೇಳೆ ಉಪ ಚುನಾವಣೆ ವೇಳೆಗೆ ಅನರ್ಹತೆ ವಿಚಾರ ಇತ್ಯರ್ಥವಾಗದೇ ಇದ್ದರೆ ಅಥವಾ ಅನರ್ಹತೆಯನ್ನು ಸುಪ್ರೀಂ ಕೋರ್ಟ್ ಮಾನ್ಯ ಮಾಡಿದರೆ ಕ್ಷೇತ್ರದಲ್ಲಿ ಯಾರನ್ನು ಕಣಕ್ಕಿಳಿಸಬೇಕೆಂಬ ಲೆಕ್ಕಾಚಾರವನ್ನು ಬಿಜೆಪಿ ಮಾಡುತ್ತಿದೆ.
ಅತ್ತ ಸ್ಥಳೀಯ ಬಿಜೆಪಿ ಮುಖಂಡರು ವಿಜಯೇಂದ್ರ ಅವರೇ ಪ್ರಬಲ ಅಭ್ಯರ್ಥಿಯಾಗಲಿದ್ದಾರೆ. ಅಷ್ಟಕ್ಕೂ ಅವರ ಪೂರ್ವಜರ ಊರು ಬೂಕನಕೆರೆ ನಮ್ಮ ತಾಲೂಕಿನಲ್ಲಿಯೇ ಇರುವುದರಿಂದ ಅವರು ಗೆಲ್ಲಬಹುದು ಎಂಬ ವಿಶ್ಲೇಷಣೆಯಲ್ಲಿ ತೊಡಗಿದ್ದಾರೆ.
ಈ ಮಧ್ಯೆ, ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಗೆ ಪ್ರಬಲ ಆಕಾಂಕ್ಷಿಯಾಗಿರುವ ಬೂಕಳ್ಳಿ ಮಂಜು ಅವರೇ ವಿಜಯೇಂದ್ರ ಸ್ಪರ್ಧೆ ಸಾಧ್ಯತೆ ಹೆಚ್ಚಿದೆ ಎಂದು ಹೇಳುವ ಮೂಲಕ ವಿಜಯೇಂದ್ರ ಅವರ ಸ್ಪರ್ಧೆಯ ಸುಳಿವು ನೀಡಿದ್ದಾರೆ.
Comments
Post a Comment