ಸ್ಪೋಟಕ ಬ್ರೇಕಿಂಗ್: ಉಪ ಚುನಾವಣೆ ಘೋಷಣೆ ಬೆನ್ನಲ್ಲೇ ರಾಜೀನಾಮೆ ನೀಡಿದ ಪ್ರಭಾವಿ ಅನರ್ಹ ಶಾಸಕ


Image result for ಅನರ್ಹ ಶಾಸಕರು
ಉಪಚುನಾವಣೆ ಘೋಷಣೆ ಬೆನ್ನೆಲ್ಲೇ ಅನರ್ಹ ಡಾ. ಕೆ. ಸುಧಾಕರ್ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾದ ಸುಧಾಕರ್ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಸೆಪ್ಟಂಬರ್ 23 ರೊಳಗೆ ನಿರ್ಧಾರ ಕೈಗೊಳ್ಳಬೇಕೆಂದು ಹೈಕೋರ್ಟ್ ಸೂಚನೆ ನೀಡಿದ್ದ ಹಿನ್ನಲೆಯಲ್ಲಿ ಅವರು ರಾಜೀನಾಮೆ ನೀಡಿದ್ದಾರೆನ್ನಲಾಗಿದೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಉಪಚುನಾವಣೆಗಾಗಿ ಅವರು ತಯಾರಿ ನಡೆಸಲಿದ್ದಾರೆ.


Comments