ಅನರ್ಹ ಶಾಸಕರಿಗೆ ಮತ್ತೊಂದು `ಶಾಕ್' ನೀಡಲು ಮುಂದಾದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹಾಗೂ ಕಾಂಗ್ರೆಸ್ ಬಿಗ್ ಪ್ಲಾನ್!

ಕೇಂದ್ರ ಚುನಾವಣಾ ಆಯೋಗ ರಾಜ್ಯದ ಅನರ್ಹ ಶಾಸಕರ 15 ಕ್ಷೇತ್ರಗಳಿಗೆ ಉಪಚುನಾವಣೆಗೆ ದಿನಾಂಕ ಘೋಷಣೆ ಮಾಡಿದ್ದು, ಕಾಂಗ್ರೆಸ್ ಉಪಸಮರಕ್ಕೆ ಭರ್ಜರಿ ಸಿದ್ಧತೆ ನಡೆಸಿದೆ. ಉಪಚುನಾವಣೆಯ 15 ಕ್ಷೇತ್ರಗಳ ಪೈಕಿ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಆಪರೇಷನ್ ಹಸ್ತ ನಡೆಸಲು ಮುಂದಾಗಿದೆ ಎನ್ನಳಾಗಿದ್ದು, ಕಾಂಗ್ರೆಸ್ ಜೆಡಿಎಸ್ ಹಾಗೂ ಬಿಜೆಪಿಯಿಂದ ಅಭ್ಯರ್ಥಿಗಳನ್ನು ಕರೆತಂದು ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಟಿಕೆಟ್ ನೀಡಲು ಸಿದ್ಧತೆ ರೂಪಿಸಿದೆ ಎನ್ನಲಾಗಿದೆ.

ಹೊಸಕೋಟೆ ಬಿಜೆಪಿ ಸಂಸದ ಬಚ್ಚೇಗೌಡರ ಪುತ್ರ ಶರತ್ ಬಚ್ಚೇಗೌಡರನ್ನು ಕಾಂಗ್ರೆಸ್ ಗೆ ಕರೆತಂದು ಅಭ್ಯರ್ಥಿ ಮಾಡಲು ಕಾಂಗ್ರೆಸ್ ಹಿರಿಯ ನಾಯಕರು ನಿರ್ಧರಿಸಿದ್ದಾರೆ ಎನ್ನಲಾಗಿದ್ದು, ಚಿಕ್ಕಬಳ್ಳಾಪುರದಲ್ಲಿ ಜೆಡಿಎಸ್ ಅಭ್ಯರ್ಥಿ ಅಂಜನಪ್ಪರನ್ನು ಕಾಂಗ್ರೆಸ್ ಟಿಕೆಟ್ ನೀಡಲು ಪ್ಲಾನ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನು ಹಿರೇಕೆರೂರು ಬಿ.ಸಿ.ಪಾಟೀಲ್ ಅಥವಾ ಅವರ ಬೆಂಬಲಿತ ಅಭ್ಯರ್ಥಿ ವಿರುದ್ಧ ಬಿಜೆಪಿ ಪರಾಜಿತ ಅಭ್ಯರ್ಥಿ ಯು.ಬಿ.ಬಣಕಾರ್ ಅಥವಾ ಪುತ್ರನ್ನು ಹಾಗೂ ಯಶವಂತಪುರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿದ್ದ ಜವರಾಯಿಗೌಡರನ್ನು ಕಾಂಗ್ರೆಸ್ ಗೆ ಸೆಳೆಯಲು ಕೈ ನಾಯಕರು ಮುಂದಾಗಿದ್ದಾರೆ ಎನ್ನಲಾಗಿದ್ದು, ಅನರ್ಹ ಶಾಸಕರಿಗೆ ಬಿಗ್ ಶಾಕ್ ನೀಡಲು ಕಾಂಗ್ರೆಸ್ ಬಿಗ್ ಪ್ಲಾನ್ ರೂಪಿಸುತ್ತಿದೆ.

Comments