ಕೊನೆಗೂ ಫಿಕ್ಸ್ ಆಯ್ತು ಕಾಂಗ್ರೆಸ್ ನ ವಿಪಕ್ಷ ಸ್ಥಾನಕ್ಕೆ ನಾಯಕ ಆಯ್ಕೆ.? ಯಾರು ಊಹಿಸದ ಕಾಂಗ್ರೆಸ್ ನ ಮಾಸ್ ಲೀಡರ್.?

ಕಾಂಗ್ರೆಸ್ ನಲ್ಲಿ ವಿಪಕ್ಷ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬಹುದು ಎಂಬ ಕುತೂಹಲ ರಾಜ್ಯ ರಾಜಕೀಯದಲ್ಲಿ ಮೂಡಿದೆ. ಮುಂದಿನ ದಿನಗಳಲ್ಲಿ ಪಕ್ಕ್ಷವನ್ನು ಯಶಸ್ವಿಯಾಗಿ ಮುನ್ನಡೆಸುವ ನಿಟ್ಟಿನಲ್ಲಿ ಒಬ್ಬ ಉತ್ತಮ ಹಾಗೂ ಬಲಿಷ್ಥ ಸ್ಯಾಕನ ಅಗತ್ಯವಿದೆ ಎಂದು ಕಾಂಗ್ರೆಸ್ ಹೈಕಮಾಂಡ್ ಮನಗಂಡಿದೆ. ಈ ನಡುವೆ ಕೇಂದ್ರ ನಾಯಕರಾದ ಮಧುಸೂಧನ್ ಮಿಸ್ತ್ರಿ ಇಲ್ಲಿಗೆ ವೀಕ್ಷಕರಾಗಿ ಆಗಮಿಸಿದ್ದಾರೆ.

ವಿಧಾನಸಭೆ ವಿರೋಧ ಪಕ್ಷ ನಾಯಕರ ಆಯ್ಕೆ ಕುರಿತ ಚರ್ಚೆ ಪ್ರಗತಿಯಲ್ಲಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ವಿಪಕ್ಷ ನಾಯಕರಾಗುವ ಎಲ್ಲಾ ಸಾಧ್ಯತೆಗಳಿವೆ ಎಂದು ಕಾಂಗ್ರೆಸ್ ಹಿರಿಯ ನಾಯಕ ರಾಮಲಿಂಗಾ ರೆಡ್ಡಿಯವರು ಭಾನುವಾರ ಹೇಳಿದ್ದಾರೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಮಧುಸೂದನ್ ಮಿಸ್ತ್ರಿಯವರು ನಡೆಸಿದ್ದ ಸಭೆಯಲ್ಲಿ ಭಾಗಿಯಾದ ಬಳಿಕ ಪ್ರತಿಕ್ರಿಯೆ ನೀಡಿರುವ ಅವರು, ಸಭೆಯಲ್ಲಿ ವಿರೋಧ ಪಕ್ಷದ ನಾಯಕರ ಆಯ್ಕೆ ಕುರಿತಂತೆ ಬಹುತೇಕ ಚರ್ಚೆ ನಡೆಯಿತು. ಸಿದ್ದರಾಮಯ್ಯ ಹಾಗೂ ಹೆಚ್.ಕೆ ಪಾಟೀಲ್ ಇಬ್ಬರೂ ರೇಸ್ ನಲ್ಲಿದ್ದಾರೆ. ಸಿದ್ದರಾಮಯ್ಯ ಅವರೇ ವಿರೋಧ ಪಕ್ಷದ ನಾಯಕರಾಗುವ ಎಲ್ಲಾ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ. ಈ ಕುರಿತು ಶಾಸಕರು ಹಾಗೂ ಎಂಎಲ್'ಸಿಗಳೊಂದಿಗೆ ಚರ್ಚೆ ಮುಂದುವರೆದಿದೆ. ಶೀಘ್ರದಲ್ಲೇಯ ವಿಧಾನಸಭೆ ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

Comments