ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಕನಕಪುರದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆದಿದ್ದು, ಕೈಗೊಂಡ ಕ್ರಮದ ಬಗ್ಗೆ ವರದಿ ನೀಡುವಂತೆ ಹೈಕೋರ್ಟ್ ಆದೇಶ ನೀಡಿದೆ.
ಅರಣ್ಯ ಒತ್ತುವರಿ ತೆರವು ಕುರಿತಾಗಿ ಮಾಹಿತಿ ನೀಡುವಂತೆ ಹೈಕೋರ್ಟ್ ಸೂಚಿಸಿದೆ. ಇಲಾಖಾ ವಿಚಾರಣಾ ವರದಿ ಸಲ್ಲಿಸುವಂತೆಯೂ ನಿರ್ದೇಶಿಸಿದೆ. ಅಧಿಕಾರಿಗಳ ವಿರುದ್ಧ ಇಲಾಖಾ ವಿಚಾರಣೆಯ ವರದಿಯನ್ನು ಸಲ್ಲಿಸಲು ಸೂಚಿಸಿದ್ದು, ನವಂಬರ್ 30 ರೊಳಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಸೂಚನೆ ನೀಡಲಾಗಿದೆ.
ಡಿಸೆಂಬರ್ 5ಕ್ಕೆ ಪಿಐಎಲ್ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. ಡಾ.ಯು.ವಿ. ಸಿಂಗ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಒಟ್ಟು 143 ಅರಣ್ಯ ಪ್ರಕರಣಗಳನ್ನು ದಾಖಲಿಸಲಾಗಿತ್ತು. 68 ಕೇಸುಗಳಲ್ಲಿ ಆರೋಪ ಪಟ್ಟಿ ಸಲ್ಲಿಸಲಾಗಿದ್ದು, 22 ಅರಣ್ಯಾಧಿಕಾರಿಗಳ ವಿರುದ್ಧ ತನಿಖೆ ನಡೆದಿತ್ತು. ರಾಮನಗರ ಜಿಲ್ಲೆಯ ಕನಕಪುರದ ಎ.ಸಿ. ಶಿವರಾಜು, ನಾರಾಯಣಸ್ವಾಮಿ ಹೈಕೋರ್ಟಿಗೆ ಪಿಐಎಲ್ ಸಲ್ಲಿಸಿದ್ದರು. ಡಿ.ಕೆ. ಶಿವಕುಮಾರ್, ಡಿ.ಕೆ. ಸುರೇಶ್ ಗೆ ನೋಟಿಸ್ ಜಾರಿ ಮಾಡಲಾಗಿತ್ತು ಎನ್ನಲಾಗಿದೆ.
Comments
Post a Comment