ಹೌದು. ಈ ಹಿಂದೆ ಸಿಬಿಐ ಬಂಧನಕ್ಕೆ ಒಳಗಾಗಿ ಬಿಡುಗಡೆಯಾದ ಅಮಿತ್ ಶಾ ನಂತರ ಪವರ್ ಫುಲ್ ಲೀಡರ್ ಆಗಿ ಬೆಳೆದಿದ್ದಾರೆ. ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ, ಬಿಜೆಪಿ ರಾಷ್ಟ್ರ ಅಧ್ಯಕ್ಷರಾಗಿ ಈಗ ಕೇಂದ್ರ ಗೃಹ ಸಚಿವರಾಗಿದ್ದಾರೆ. ನಕಲಿ ಎನ್ ಕೌಂಟರ್ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಿಡುಗಡೆಯಾದ ನಂತರ ಅಮಿತ್ ಶಾಗೆ ಹೇಗೆ ಹೈಕಮಾಂಡ್ ಭರ್ಜರಿ ಗಿಫ್ಟ್ ನೀಡಿತ್ತೋ ಅದೇ ರೀತಿ ಡಿಕೆ ಶಿವಕುಮಾರ್ ಅವರಿಗೂ ಹೈಕಮಾಂಡ್ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ನೀಡಲಿದೆ ಎನ್ನುವ ವಿಚಾರ ಈಗಾಗಲೇ ಕಾಂಗ್ರೆಸ್ ವಲಯದಲ್ಲಿ ಚರ್ಚೆಯಾಗುತ್ತಿದೆ.
ಈಗ ದೇಶಾದ್ಯಂತ ಕಾಂಗ್ರೆಸ್ ಪ್ರಭಾವ ಕಡಿಮೆಯಾಗಿದೆ. ರಾಜ್ಯ ರಾಜಕಾರಣದಲ್ಲಿ ಪವರ್ ಫುಲ್ ಆಗಿರುವ ಡಿಕೆಶಿ ರಾಷ್ಟ್ರ ಮಟ್ಟದಲ್ಲೂ ತಮ್ಮದೇ ಆದ ಸಂಪರ್ಕ ಹೊಂದಿದ್ದಾರೆ. ಈಗಾಗಲೇ ಟ್ರಬಲ್ ಶೂಟರ್ ಎಂಬ ಖ್ಯಾತಿ ಪಡೆದಿರುವ ಡಿಕೆಶಿ ಬಂಧನದ ವಿಚಾರವೂ ರಾಷ್ಟ್ರ ಮಟ್ಟದಲ್ಲಿ ಸುದ್ದಿ ಮಾಡಿದ್ದರಿಂದ ಕಾಂಗ್ರೆಸ್ ಶಿವಕುಮಾರ್ ವಿಷಯದಲ್ಲಿ ಗಂಭೀರವಾಗಿ ಯೋಚಿಸತೊಡಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
Comments
Post a Comment