ಪರಿಹಾರ ಹಣ ಹೆಚ್ಚು ಮಾಡುವ ಶಕ್ತಿ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನೆರೆಯಿಂದಾಗಿ ರಾಜ್ಯದಲ್ಲಿ ದೊಡ್ಡಮಟ್ಟದ ಹಾನಿಯಾಗಿದೆ. ಹಾಗಾಗಿ ಪರಿಹಾರ ಹಣವನ್ನು ಈಗ ಹೆಚ್ಚಿಸಲು ಸಾಧ್ಯವಿಲ್ಲ. ಮುಂದೆ ಬಜೆಟ್ ಮಂಡನೆಯ ನಂತರ ಅದರ ಬಗ್ಗೆ ನೋಡೋಣ ಎಂದು ತಿಳಿಸಿದ್ದಾರೆ. ಮುಖ್ಯವಾಗಿ ಬೆಳೆನಾಶ, ಮನೆ ನಿರ್ಮಾಣಕ್ಕೆ ಒತ್ತು ನೀಡಲಾಗುವುದು. ಕೇಂದ್ರದಿಂದ ಮತ್ತೆ ಪರಿಹಾರ ಬಿಡುಗಡೆ ಮಾಡಲಾಗುವುದು. ಮುಂದಿನ ಬಜೆಟ್ನಲ್ಲಿ ಹೆಚ್ಚಿನ ಅನುದಾನ ಕಾಯ್ದಿರಿಸಲಾಗುವುದು ಎಂದಿದ್ದಾರೆ. ಕೇಂದ್ರದಿಂದ ಬಂದಿರುವ ಮೊದಲ ಕಂತಿನ ಹಣವನ್ನು ಬೆಳೆ ನಾಶ, ಮನೆ ನಿರ್ಮಾಣ ಮೊದಲಾದ ಕಾರ್ಯಗಳಿಗೆ ಬಳಸಲಾಗುವುದು. ಮುಂದಿನ ದಿನಗಳಲ್ಲಿ ಕೇಂದ್ರದಿಂದ ಹೆಚ್ಚುವರಿ ಪರಿಹಾರ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Comments
Post a Comment