ಇದೀಗ ಬಂದ ಸುದ್ದಿ: ದಸರಾ ಸಂಧರ್ಭದಲ್ಲಿಯೇ ಸಿದ್ದರಾಮಯ್ಯರಿಗೆ ಸಿಕ್ಕಿತು ಭರ್ಜರಿ ಸಿಹಿ ಸುದ್ದಿ.? ಬೆಂಗಲಿಗರಲ್ಲಿ ಹರ್ಷ.?
ಕಾಂಗ್ರೆಸ್ ನಲ್ಲಿ ವಿಪಕ್ಷ ನಾಯಕನ ಸ್ಥಾನಕ್ಕೆ ಆಯ್ಕೆ ಕಸರತ್ತು ನಡೆದಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ವಿರೋಧ ಪಕ್ಷದ ನಾಯಕನ ಹೊಣೆ ನೀಡಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಅಧಿಕೃತ ಘೋಷಣೆಯಷ್ಟೇ ಬಾಕಿ ಉಳಿದಿದೆ ಎನ್ನಲಾಗಿದೆ.
ಕಳೆದ ಎರಡು ದಿನಗಳ ಹಿಂದೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂಧನ್ ಮಿಸ್ತ್ರೀ ಬೆಂಗಳೂರಿಗೆ ಧಾವಿಸಿ ಕಾಂಗ್ರೆಸ್ ಹಿರಿಯ ನಾಯಕರನ್ನು ಭೇಟಿ ಮಾಡಿ ಅವರಿಂದ ವೈಯಕ್ತಿಕ ಅಭಿಪ್ರಾಯ ಸಂಗ್ರಹಿಸಿದ್ದರು. ಈ ವೇಳೆ, ಮೂಲ ಕಾಂಗ್ರೆಸ್ ಮುಖಂಡರಿಂದ ಸಿದ್ದರಾಮಯ್ಯ ಅವರಿಗೆ ವಿಪಕ್ಷ ನಾಯಕನ ಸ್ಥಾನ ನೀಡಲು ವಿರೋಧ ವ್ಯಕ್ತವಾಗಿತ್ತು. ಆದರೆ, ಎಲ್ಲ ಅಭಿಪ್ರಾಯಗಳನ್ನು ಅಳೆದುತೂಗಿ ಕಾಂಗ್ರೆಸ್ ಹೈಕಮಾಂಡ್, ವಿಧಾನಸಭೆ ವಿರೋಧ ಪಕ್ಷದ ನಾಯಕರನ್ನಾಗಿ ಸಿದ್ದರಾಮಯ್ಯನವರನ್ನು ನೇಮಕ ಮಾಡಲು ತೀರ್ಮಾನಿಸಿದ್ದು, ಇನ್ನೆರಡು ದಿನಗಳಲ್ಲಿ ಈ ಕುರಿತು ಅಧಿಕೃತ ಘೋಷಣೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ನ ಕೆಲ ನಾಯಕರು ದೆಹಲಿಗೆ ಧಾವಿಸಿ ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹೇರಿ ತಮಗೆ ವಿಪಕ್ಷ ನಾಯಕನ ಸ್ಥಾನ ನೀಡುವಂತೆ ಮನವಿ ಮಾಡಿದ್ದರು. ಇನ್ನು ವಿಪಕ್ಷ ನಾಯಕನ ಸ್ಥಾನಕ್ಕೆ ಹಲವರು ರೇಸ್ ನಲ್ಲಿದ್ದರು. ಎಚ್.ಕೆ.ಪಾಟೀಲ್ ಅವರಿಗೆ ವಿಪಕ್ಷ ನಾಯಕನ ಸ್ಥಾನ ನೀಡಲಾಗುತ್ತದೆ ಎಂತಲೂ ಹೇಳಲಾಗಿತ್ತು. ಆದರೆ, ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ವಿಪಕ್ಷ ನಾಯಕನ ಸ್ಥಾನ ನೀಡಲು ಮನಸ್ಸು ಮಾಡಿದ್ದಾರೆಂದು ಹೇಳಲಾಗಿದೆ. ಈ ಮೂಲಕ ಸಿದ್ದರಾಮಯ್ಯ ಅವರಿಗೆ ಈ ವಿಜಯದಶಮಿಗೆ ಸಿಹಿಸುದ್ದಿ ಸಿಗುತ್ತಾ ಎಂಬ ಕುತೂಹಲ ಸೃಷ್ಟಿಯಾಗಿದೆ….
Comments
Post a Comment