ಕಳೆದ ವಾರ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದಿದ್ದ ಚುನಾವಣೆಗಳಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಅದು 961ಕ್ಕೂ ಅಧಿಕ ವಾರ್ಡ್ ಗಳಲ್ಲಿ ಪ್ರಾಬಲ್ಯ ಮೆರೆದಿದ್ದರೆ, ಬಿಜೆಪಿ 737 ವಾರ್ಡ್‌ಗಳೊಡನೆ ನಂತರದ ಸ್ಥಾನದಲ್ಲಿದೆ.
ರಾಜ್ಯದ 33 ಜಿಲ್ಲೆಗಳ ಪೈಕಿ 24ರಲ್ಲಿ ಮೂರು ಮಹಾನಗರ ಪಾಲಿಕೆಗಳು, 18 ನಗರ ಪರಿಷದ್‌ಗಳು ಮತ್ತು 28 ನಗರ ಪಾಲಿಕೆಗಳು ಸೇರಿದಂತೆ 49 ನಗರ ಸ್ಥಳೀಯ ಸಂಸ್ಥೆಗಳಿಗೆ ಶನಿವಾರ ಚುನಾವಣೆ ನಡೆದಿತ್ತು.
ರಾಜ್ಯದಲ್ಲಿ ಕಳೆದ ಡಿಸೆಂಬರ್‌ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಡೆದ ಮೊದಲ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ 2,105 ವಾರ್ಡ್‌ಗಳ ಪೈಕಿ ಸರಿಸುಮಾರು ಅರ್ಧದಷ್ಟು ಪಕ್ಷದ ಪಾಲಾಗಿವೆ. ನಿರೀಕ್ಷಿತ ಫಲಿತಾಂಶ ಬಂದಿದೆ ಎಂದು ಮುಖ್ಯಮಂತ್ರಿ ಅಶೋಕ ಗೆಹ್ಲೋಟ್ ಹೇಳಿದರು.
Comments
Post a Comment