ಉಪಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ರಾಜ್ಯ ಬಿಜೆಪಿಗೆ ಇದೀಗ ಬಿಗ್ ಶಾಕ್ ಎದುರಾಗಿದ್ದು, ಬೈಎಲೆಕ್ಷನ್ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಿಬ್ಬರು ಕಾಂಗ್ರೆಸ್ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಕಾಗವಾಡ ಕ್ಷೇತ್ರದ ಬಿಜೆಪಿ ಆಕಾಂಕ್ಷಿ ರಾಜು ಕಾಗೆ ಹಾಗೂ ಗೋಕಾಕ್ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಅಶೋಕ್ ಪೂಜಾರಿ ಡಿ.ಕೆ.ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಾಗಿ ಕಣಕ್ಕಿಳಿದು ಪರಾಭವಗೊಂಡಿದ್ದ ರಾಜು ಕಾಗೆ ಹಾಗೂ ಅಶೋಕ್ ಪೂಜಾರಿ ಅವರು ಈ ಬಾರಿಯ ಉಪಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಗಾಗಿ ಭಾರೀ ಕಸರತ್ತು ನಡೆಸಿದ್ದಾರೆ. ಆದರೆ, ಬಿಜೆಪಿ ಸರ್ಕಾರ ರಚನೆಗೆ ಕಾರಣರಾದ ಅನರ್ಹ ಶಾಸಕರಿಗೆ ಬಿಜೆಪಿ ಟಿಕೆಟ್ ನೀಡಲಾಗುತ್ತದೆ ಎನ್ನಲಾಗಿದೆ. ಹೀಗಾಗಿ ಬಿಜೆಪಿ ಟಿಕೆಟ್ ಕೈ ತಪ್ಪುವ ಭೀತಿಯಲ್ಲಿರುವ ಬಿಜೆಪಿಯ ಮಾಜಿ
Comments
Post a Comment