ಕನ್ನಡ, ತಮಿಳು ಸೇರಿ ದಕ್ಷಿಣ ಭಾರತದ ಚಿತ್ರಗಳಲ್ಲಿ ನಟಿಸಿ ಜನಪ್ರಿಯತೆ ಗಳಿಸಿರುವ ನಟಿ ನಮಿತಾ ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಈ ಮೊದಲು ನಟಿ ನಮಿತಾ ಮದುವೆಯಾದ ನಂತರ ಎಐಎಡಿಎಂಕೆ ಪಕ್ಷಕ್ಕೆ ಸೇರ್ಪಡೆಯಾಗಿದ್ದರು.ಈಗ ಅವರ ಪತಿಯೊಂದಿಗೆ ಬಿಜೆಪಿಗೆ ಸೇರಲು ಆ ಪಕ್ಷವನ್ನು ತೊರೆದಿದ್ದಾರೆ. ಬಿಜೆಪಿ ಸೇರ್ಪಡೆಯಾಗುವ ಸಂದರ್ಭದಲ್ಲಿ ಪೊನ್ ರಾಧಾ ಕೃಷ್ಣನ್ ಕೂಡ ಉಪಸ್ಥಿತರಿದ್ದರು ಎನ್ನಲಾಗಿದೆ.
ತಮಿಳುನಾಡಿನಲ್ಲಿ ಬಿಜೆಪಿಗೆ ಸ್ಟಾರ್ ಸ್ಪೀಕರ್ಗಳ ಕೊರತೆಯಿರುವ ಹಿನ್ನಲೆಯಲ್ಲಿ ಈಗ ನಮಿತಾ ಅವರನ್ನು ಸ್ವಾಗತಿಸಲಾಗುತ್ತದೆ.ಇವರ ಜೊತೆಗೆ ರಾಧಾ ರವಿ ತಮಿಳುನಾಡಿನಲ್ಲಿ ಬಿಜೆಪಿಗೆ ಸೇರಿದ್ದಾರೆ.
ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಶನಿವಾರ ತಮಿಳುನಾಡಿನ 16 ಜಿಲ್ಲೆಗಳಲ್ಲಿ ಪಕ್ಷದ ಕಚೇರಿಗಳಿಗೆ ಅಡಿಪಾಯ ಹಾಕಿದರು.
Comments
Post a Comment