ರಾಜ್ಯದಲ್ಲಿ ಉಪಚುನಾವಣೆ ಬಳಿಕ ಮತ್ತೊಮ್ಮೆ ಕಾಂಗ್ರೆಸ್ ಜೊತೆ ಮೈತ್ರಿ ಕುರಿತಂತೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಸೂಚನೆ ನೀಡಿದ್ದಾರೆ. ಬೈಎಲೆಕ್ಷನ್ ಬಳಿಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅತಂತ್ರಸ್ಥಿತಿ ಗೆ ತಲುಪಿದರೆ,ಕಾಂಗ್ರೆಸ್ ಹೈಕಮಾಂಡ್ ಕೈಗೊಳ್ಳುವ ತೀರ್ಮಾನವನ್ನು ಅವಲಂಬಿಸಿ ಜೆಡಿಎಸ್ ಮುಂದಿನ ನಿರ್ಧಾರ ಕೈಗೊಳ್ಳಲಿದೆ ಎನ್ನುವ ಮೂಲಕ ಮತ್ತೆ ಕಾಂಗ್ರೆಸ್ ಜೊತೆ ಮೈತ್ರಿ ಸಾಧ್ಯಾ ಸಾಧ್ಯತೆಗಳ ಬಗ್ಗೆ ದೇವೇಗೌಡರು ಸೂಚನೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಬಿಜೆಪಿ ಅಥವಾ ಕಾಂಗ್ರೆಸ್ ಜೊತೆಗೆ ಹೊಂದಾಣಿಕೆಯ ಪ್ರಶ್ನೆಯೇ ಇಲ್ಲ. ಆದರೆ ನಾವು 2 ಮೈತ್ರಿ ಸರ್ಕಾರಗಳನ್ನು ನೋಡಿ ಆಗಿದೆ. ಆದ್ದರಿಂದ ಸಾಕಷ್ಟು ಬುದ್ಧಿ ಕಲಿತುಕೊಂಡಿದ್ದೇವೆ. ಇನ್ನು ಮುಂದೆಯೂ ಚುನಾವಣೆಯಲ್ಲಿ ಜೆಡಿಎಸ್ ಅನ್ನು ನಿರ್ಲಕ್ಷಿಸಿ ಯಾರೂ ಸರ್ಕಾರ ರಚನೆ ಮಾಡಲು ಸಾಧ್ಯವಿಲ್ಲ ಎಂದರು.
Comments
Post a Comment