ಮಂಡ್ಯದ ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಅವರ ಭರ್ಜರಿ ಗೆಲುವಿಗೆ ಕಾರಣರಾಗಿರುವ ಬಿಜೆಪಿ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ ಅವರಿಗೆ ಸಚಿವ ಸ್ಥಾನ ನೀಡುವಂತೆ ವೀರಶೈವ ಯುವ ಘಟಕದ ವತಿಯಿಂದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗೆ ಮನವಿ ಮಾಡಲಾಗಿದೆ.
ಮಂಡ್ಯ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಬಿಜೆಪಿ ಅಭ್ಯರ್ಥಿ ಗೆಲ್ಲಲು ಕಾರಣೀಕರ್ತರಾದ ಯುವ ಮುಖಂಡ ಬಿ.ವೈ. ವಿಜಯೇಂದ್ರ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿ, ಹಾಲಿ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಯುವ ಘಟಕದ ವತಿಯಿಂದ ಪತ್ರ ಬರೆಯಲಾಗಿದೆ.
ಮಂಡ್ಯದಲ್ಲಿ ಬಿಜೆಪಿ ಬಿಜೆಪಿಯ ಅಧಿಕೃತ ಅಭ್ಯರ್ಥಿ ಗೆಲುವು ಸಾಧಿಸಿರುವುದು ಹೊಸ ಇತಿಹಾಸ ಸೃಷ್ಟಿಸುವಂತಾಗಿದೆ. ಈ ದಾಖಲೆಗಳಿಗೆ ಕಾರಣೀಕರ್ತರಾದ ವಿಜಯೇಂದ್ರ ಅವರ ಶ್ರಮವನ್ನು ಪಕ್ಷ ಪರಿಗಣಿಸಿ ಸಚಿವರನ್ನಾಗಿ ಮಾಡುವಂತೆ ಮನವಿ ಮಾಡಿದೆ.
Comments
Post a Comment